ETV Bharat / city

ಪ್ರತಿಭಟನಾನಿರತ ಹಿರಿಯ ವಕೀಲ ಬಿ.ಡಿ.ಹಿರೇಮಠ ಅಸ್ವಸ್ಥ: ಆಸ್ಪತ್ರೆಗೆ ದಾಖಲು - haveri farmers protest news

ಏತ ನೀರಾವರಿ ಯೋಜನೆಗೆ ರೈತರ ಜಮೀನನ್ನು ಸ್ವಾಧೀನ ಮಾಡಿಕೊಂಡಿರುವುದನ್ನು ವಿರೋಧಿಸಿ ಹಾವೇರಿಯಲ್ಲಿ ರೈತರು ಹೋರಾಟ ಮುಂದುವರೆಸಿದ್ದು, ಈ ವೇಳೆ ಹಿರಿಯ ವಕೀಲ ಬಿ.ಡಿ.ಹಿರೇಮಠ ಅಸ್ವಸ್ಥಗೊಂಡಿದ್ದಾರೆ. ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹಿರಿಯ ವಕೀಲ ಬಿ.ಡಿ.ಹಿರೇಮಠ
ಹಿರಿಯ ವಕೀಲ ಬಿ.ಡಿ.ಹಿರೇಮಠ
author img

By

Published : Dec 17, 2020, 1:25 PM IST

Updated : Dec 17, 2020, 1:46 PM IST

ಹುಬ್ಬಳ್ಳಿ: ರೈತರ ಹೋರಾಟಕ್ಕೆ ಸಾಥ್ ನೀಡಿದ್ದ ಧಾರವಾಡ ಹೈಕೋರ್ಟ್​ನ ಹಿರಿಯ ವಕೀಲ ಬಿ.ಡಿ. ಹಿರೇಮಠ ಅವರು ಅಸ್ವಸ್ಥಗೊಂಡಿದ್ದು ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಬಿ.ಡಿ.ಹಿರೇಮಠ ದಾಖಲು

ಏತ ನೀರಾವರಿ ಯೋಜನೆಗೆ ರೈತರ ಜಮೀನನ್ನು ಸ್ವಾಧೀನ ಮಾಡಿಕೊಂಡಿರುವುದನ್ನು ವಿರೋಧಿಸಿ ಹಾವೇರಿಯಲ್ಲಿ ರೈತರ ಹೋರಾಟ ತೀವ್ರಗೊಂಡಿದೆ. ಈ ಹೋರಾಟದಲ್ಲಿ ಬಿ.ಡಿ.ಹಿರೇಮಠ ಸಹ ಭಾಗವಹಿಸಿ, ರೈತರ ಬೆಂಬಲಕ್ಕೆ ನಿಂತಿದ್ದು, ಕಳೆದ 14 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.

ನಿನ್ನೆ ಸಂಜೆ ಪ್ರತಿಭಟನಾ ಸ್ಥಳದಲ್ಲಿ ಹಿರೇಮಠ ಅವರು ತೀವ್ರ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಓದಿ: ರೈತರ ಭೂಸ್ವಾಧೀನ ಖಂಡಿಸಿ 5ನೇ ದಿನಕ್ಕೆ ಪ್ರತಿಭಟನೆ.. ಅನ್ನ-ನೀರು ತ್ಯಜಿಸಿದ ನ್ಯಾಯವಾದಿ ಬಿ ಡಿ ಹಿರೇಮಠ..

Last Updated : Dec 17, 2020, 1:46 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.