ಧಾರವಾಡ: ಕೊರೊನಾ ಸೋಂಕಿಗೆ ತುತ್ತಾಗಿ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ ಡಾ.ಚನ್ನವೀರ ಕಣವಿ ಅವರ ಆರೋಗ್ಯದಲ್ಲಿ ತುಸು ಏರುಪೇರು ಉಂಟಾಗಿತ್ತು ಎಂದು ವೈದ್ಯರು ತಿಳಿಸಿದ್ದಾರೆ.
ಚನ್ನವೀರ ಕಣವಿ ಅವರ ದೇಹದಲ್ಲಿ ಆಮ್ಲಜನಕ ಪ್ರಮಾಣ ಕುಗ್ಗಿದ್ದರಿಂದ ಮಂಗಳವಾರ ಅದರ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಈಗ ಡಾ.ಕಣವಿ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಅವರಿಗೆ ಉತ್ತಮ ಚಿಕಿತ್ಸೆ ನೀಡಲು ಜಿಲ್ಲಾಡಳಿತ, ಎಸ್ಡಿಎಂ ಆಸ್ಪತ್ರೆಯ ಆಡಳಿತ ಮಂಡಳಿ ಕ್ರಮವಹಿಸಿದೆ.
ವೈದ್ಯರೊಂದಿಗೆ ಜಿಲ್ಲಾಡಳಿತ ನಿರಂತರ ಸಂಪರ್ಕದಲ್ಲಿದ್ದು, ಡಾ.ಕಣವಿ ಅವರ ಆರೋಗ್ಯ ಮಾಹಿತಿ ಪಡೆಯಲಾಗುತ್ತಿದೆ. ಹಿರಿಯ ಕವಿ ಡಾ.ಕಣವಿ ಅವರು ಬೇಗ ಗುಣಮುಖರಾಗಲಿ ಎಂದು ಜಿಲ್ಲಾಡಳಿತ ಪ್ರಾರ್ಥಿಸಿದೆ.
ಇದನ್ನೂ ಓದಿ: ದೇಶದಲ್ಲಿ ಶೇ.50ರಷ್ಟು 15-18 ವಯಸ್ಸಿನ ಮಕ್ಕಳಿಗೆ ಕೋವಿಡ್ ಮೊದಲ ಡೋಸ್ ಪೂರ್ಣ