ಧಾರವಾಡ: ಕೊರೊನಾ ಸೋಂಕಿನಿಂದ ಬಳಲುತ್ತಿರುವ ಹಿರಿಯ ಕವಿ, ನಾಡೋಜ ಡಾ.ಚೆನ್ನವೀರ ಕಣವಿ ಅವರು ಇಲ್ಲಿನ ಎಸ್ಡಿಎಂ ಆಸ್ಪತ್ರೆಯಲ್ಲಿ ಪಡೆಯುತ್ತಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಈಗ ಸ್ಥಿರವಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಎಸ್ಡಿಎಂ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆ ಆಡಳಿತ ಮಂಡಳಿ ಜೊತೆ ಜಿಲ್ಲಾಡಳಿತ ನಿರಂತರ ಸಂಪರ್ಕದಲ್ಲಿದೆ. ಡಾ.ಚೆನ್ನವೀರ ಕಣವಿ ಅವರ ಆರೋಗ್ಯ ಕ್ಷೇಮಕ್ಕೆ ಅಗತ್ಯ ಕ್ರಮವಹಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಹಿರಿಯ ಸಾಹಿತಿ ಕಣವಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಿದಾಗ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಆಸ್ಪತ್ರೆಯಲ್ಲಿಯೇ ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆಗೊಳಿಸಿದೆ.
ಇದನ್ನೂ ಓದಿ: ಮುಷ್ಕರ ಬಿಟ್ಟು ಬೋಧನೆಗೆ ಹಿಂದಿರುಗಿ.. ಪ್ರತಿಭಟನಾನಿರತ ಅತಿಥಿ ಉಪನ್ಯಾಸಕರಿಗೆ ಸಚಿವ ಅಶ್ವತ್ಥ್ನಾರಾಯಣ ಮನವಿ