ಧಾರವಾಡ: ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಒಳಗೊಂಡಿರುವ ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅಕ್ಟೋಬರ್ 28ರಂದು ನಡೆಯಲಿರುವ ಚುನಾವಣೆಗೆ ಇಂದು ಏಳು ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ: ಇಂದು ಅಭ್ಯರ್ಥಿಗಳು ಏಳು ನಾಮಪತ್ರ ಸಲ್ಲಿಕೆ ಇದುವರೆಗೆ ಒಟ್ಟು ಹತ್ತು ನಾಮಪತ್ರಗಳು ಸಲ್ಲಿಕೆಯಾಗಿವೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್.ಎಂ. ಕುಬೇರಪ್ಪ ದ್ವಿಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದರು. ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಎಸ್.ವಿ.ಸಂಕನೂರ, ಜೆಡಿಎಸ್ ಅಭ್ಯರ್ಥಿಯಾಗಿ ಶಿವಶಂಕರ ಕಲ್ಲೂರ, ಆಜಾದ್ ಮಜ್ದೂರ್ ಕಿಸಾನ್ ಪಾರ್ಟಿ ಅಭ್ಯರ್ಥಿಯಾಗಿ ಪ್ರಕಾಶ ಕಾಂಬಳೆ ನಾಮಪತ್ರ ಸಲ್ಲಿಸಿದ್ದಾರೆ ಹಾಗೂ ಸ್ವತಂತ್ರ ಅಭ್ಯರ್ಥಿಗಳಾಗಿ ಶಿವಕುಮಾರ್ ತಳವಾರ, ಬಸವರಾಜ ತೇರದಾಳ, ಚರಣರಾಜ್ ಕೆ.ಎ. ನಾಮಪತ್ರ ಸಲ್ಲಿಸಿದ್ದಾರೆ.ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ: ಇಂದು ಅಭ್ಯರ್ಥಿಗಳು ಏಳು ನಾಮಪತ್ರ ಸಲ್ಲಿಕೆ ಅಭ್ಯರ್ಥಿಗಳ ನಾಮಪತ್ರಗಳನ್ನು ಸಹಾಯಕ ಚುನಾವಣಾಧಿಕಾರಿ ಮತ್ತು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಅವರು ಸ್ವೀಕರಿಸಿದರು. ನಾಮಪತ್ರ ಸಲ್ಲಿಸಲು ಅಕ್ಟೋಬರ್ 8 ಕೊನೆಯ ದಿನವಾಗಿದೆ. ಅಕ್ಟೋಬರ್ 9ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅ. 12 ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ.