ETV Bharat / city

ಬಿಜೆಪಿಗೆ ಅನುಕೂಲ ಮಾಡಲು ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ: ಸಿದ್ದರಾಮಯ್ಯ - JDS

ಬಿಜೆಪಿಗೆ ಸಹಾಯವಾಗಲಿ ಎಂದು ಹಾನಗಲ್​ ಮತ್ತು ಸಿಂಧಗಿ ಕ್ಷೇತ್ರಕ್ಕೆ ಜೆಡಿಎಸ್​ ಅಲ್ಪಸಂಖ್ಯಾತ ಅರ್ಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ
ಸಿದ್ದರಾಮಯ್ಯ
author img

By

Published : Oct 7, 2021, 11:37 AM IST

ಹುಬ್ಬಳ್ಳಿ: ಜೆಡಿಎಸ್ ಯಾವಾಗಲೂ ಕಾಂಗ್ರೆಸ್ ಅನ್ನು ಟಾರ್ಗೆಟ್ ಮಾಡುತ್ತಿದೆ. ‌ಹಾನಗಲ್​ ಮತ್ತು ಸಿಂಧಗಿ ಉಪಚುನಾವಣೆಯಲ್ಲಿ ಎರಡು ಕ್ಷೇತ್ರಕ್ಕೆ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, 'ಬಸವಕಲ್ಯಾಣದಲ್ಲೂ ಹೀಗೆಯೇ ಮಾಡಿದ್ದರು. ಇದೀಗ ಹಾನಗಲ್ ಹಾಗೂ ಸಿಂಧಗಿಯಲ್ಲಿ ಸಹ ಇದೇ ರೀತಿ ಮಾಡಿದ್ದಾರೆ. ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಮ್ಮ ಅಭ್ಯಂತರವಿಲ್ಲ. ಎಲ್ಲಿ ಕಣಕ್ಕಿಳಿಸಬೇಕೋ ಅಲ್ಲಿ ನಿಲ್ಲಿಸಿಲ್ಲ. ಮಂಡ್ಯ, ಹಾಸನ ಮತ್ತಿತರೆ ಕಡೆಗಳಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಹಾಕಲಿ. ಆದರೆ ಇಲ್ಲಿಗೆ ಮಾತ್ರ ಬಿಜೆಪಿಗೆ ಸಹಾಯವಾಗಲಿ ಅಂತಾ ಅಲ್ಪಸಂಖ್ಯಾತರನ್ನು ಕಣಕ್ಕಿಳಿಸಿದ್ದಾರೆ. ಜೆಡಿಎಸ್ ಹಾಗೂ ಬಿಜೆಪಿ ಒಳಒಪ್ಪಂದ ಮಾಡಿಕೊಂಡಿದೆಯೋ, ಇಲ್ಲವೋ ಗೊತ್ತಿಲ್ಲ. ಆದರೆ ಜೆಡಿಎಸ್​ನವರು ಬಿಜೆಪಿಯನ್ನು ಯಾಕೆ ಟಾರ್ಗೆಟ್ ಮಾಡುತ್ತಿಲ್ಲ?' ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿದ್ದರಾಮಯ್ಯ

ಆರ್​ಎಸ್​ಎಸ್​ ಬಗ್ಗೆ ಮಾಜಿ ಸಿಎಂ‌ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, 'ಆರ್​ಎಸ್​ಎಸ್ ಎನ್ನುವುದು ಕೋಮುವಾದಿ ಸಂಘಟನೆ. ಸಮಾಜದಲ್ಲಿ ಅಶಾಂತಿ ನಿರ್ಮಾಣ ಮಾಡುವುದು, ಹಿಂದೂ‌ಗಳನ್ನು ಮುಸ್ಲಿಮರ ವಿರುದ್ಧ ಎತ್ತಿ ಕಟ್ಟುವ ಕೆಲಸವನ್ನು ಆರ್‌ಎಸ್‌ಎಸ್ ಮಾಡುತ್ತಿದೆ. ಆದರೆ ಕಾಂಗ್ರೆಸ್ ಪಕ್ಷ ಎಲ್ಲಾ ಧರ್ಮದವರನ್ನು ಗೌರವಿಸುತ್ತದೆ. ಆರ್‌ಎಸ್‌ಎಸ್ ಮುಖವಾಡವೇ ಬಿಜೆಪಿ' ಎಂದು ಗುಡುಗಿದರು. ಇದೇ ವೇಳೆ, ಈ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

ಸೋನಿಯಾ ಗಾಂಧಿ ಭೇಟಿ ವಿಚಾರದ ಕುರಿತು ಮಾಹಿತಿ ನೀಡಿದ ಅವರು, 'ರಾಜ್ಯ ರಾಜಕಾರಣದ ಬಗ್ಗೆ ಚರ್ಚಿಸಲು ಭೇಟಿಯಾಗಿದ್ದೆ. ಅಲ್ಲಿ ರಾಷ್ಟ್ರ ರಾಜಕಾರಣದ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಸೋನಿಯಾ ಗಾಂಧಿ ರಾಷ್ಟ್ರ ರಾಜಕಾರಣಕ್ಕೆ ನನ್ನನ್ನು ಕರೆದಿಲ್ಲ. ಆ ಬಗ್ಗೆ ಯಾವುದೇ ಚರ್ಚೆಯೂ ಮಾಡಿಲ್ಲ' ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.