ETV Bharat / city

ಅಕ್ರಮ ಗಣಿಗಾರಿಕೆಯಲ್ಲಿ ಆಡಳಿತ ಪಕ್ಷ ಭಾಗಿಯಾರಬೇಕು, ಅದಕ್ಕೆ ಧ್ವನಿ ಎತ್ತುತ್ತಿಲ್ಲ : ಸಿದ್ದರಾಮಯ್ಯ - ಅಕ್ರಮ ಗಣಿಗಾರಿಕೆ ವಿಚಾರ

ಅಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೆ ಸರ್ಕಾರ ಅಥವಾ ಗಣಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಬೇಕಾಗಿತ್ತು. ಜೆಡಿಎಸ್ ನಾಯಕರ ಗಣಿ ಕಂಪನಿಗಳು ಇವೆ ಅಂತಾ ಸುಮಲತಾ ಆರೋಪ ಮಾಡಿದ್ದಾರೆ. ಅಕ್ರಮ ಗಣಿಗಾರಿಕೆಯಲ್ಲಿ ಆಡಳಿತ ಪಕ್ಷ ಭಾಗಿಯಾರಬೇಕು. ಹೀಗಾಗಿ, ಸರ್ಕಾರ ಧ್ವನಿ ಎತ್ತುತ್ತಿಲ್ಲ..

Siddaramaiah
ಸಿದ್ದರಾಮಯ್ಯ
author img

By

Published : Jul 12, 2021, 12:59 PM IST

ಹುಬ್ಬಳ್ಳಿ: ಸುಮಲತಾ ಅವರು ಕೆಆರ್​ಎಸ್​ ಡ್ಯಾಂ ಬಿರುಕು ಬಿಟ್ಟಿದೆ ಎಂದು ಆರೋಪ ಮಾಡಿದ್ದಾರೆ. ಈ ಆರೋಪದ ನಂತರ ಸರ್ಕಾರ ಅಥವಾ ಗಣಿ ಇಲಾಖೆ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಬೇಕಾಗಿತ್ತು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುಮಲತಾ ಅವರು ಕುಮಾರಸ್ವಾಮಿ ಪುತ್ರನನ್ನು ಸೋಲಿಸಿದ್ದಕ್ಕೆ ಕುಮಾರಸ್ವಾಮಿ ರಾಜಕೀಯ ಮಾಡುತ್ತಿರಬೇಕು.‌ ಕೆಆರ್​ಎಸ್ ಸುತ್ತಮುತ್ತಲಿನ 20 ಕಿ.ಮೀ ಸುತ್ತಮುತ್ತ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಸುಮಲತಾ ಆರೋಪಿಸಿದ್ದಾರೆ.

ಅಕ್ರಮ ಗಣಿಗಾರಿಕೆಯಲ್ಲಿ ಆಡಳಿತ ಪಕ್ಷ ಭಾಗಿಯಾರಬೇಕು, ಅದಕ್ಕೆ ಧ್ವನಿ ಎತ್ತುತ್ತಿಲ್ಲ: ಸಿದ್ದರಾಮಯ್ಯ

ಅಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೆ ಸರ್ಕಾರ ಅಥವಾ ಗಣಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಬೇಕಾಗಿತ್ತು. ಜೆಡಿಎಸ್ ನಾಯಕರ ಗಣಿ ಕಂಪನಿಗಳು ಇವೆ ಅಂತಾ ಸುಮಲತಾ ಆರೋಪ ಮಾಡಿದ್ದಾರೆ. ಅಕ್ರಮ ಗಣಿಗಾರಿಕೆಯಲ್ಲಿ ಆಡಳಿತ ಪಕ್ಷ ಭಾಗಿಯಾರಬೇಕು. ಹೀಗಾಗಿ, ಸರ್ಕಾರ ಧ್ವನಿ ಎತ್ತುತ್ತಿಲ್ಲ ಎಂದರು.

ಕಾಂಗ್ರೆಸ್​ನಲ್ಲಿ ಬಣಗಳಾಗಿವೆ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್​ನಲ್ಲಿ ಯಾವುದೇ ಬಣವಿಲ್ಲ. ಯಾರೋ ವೈಯಕ್ತಿಕವಾಗಿ ಹೇಳುತ್ತಿದ್ದಾರೆ. ಎಂಎಲ್​ಎಗಳು ಮುಖ್ಯಮಂತ್ರಿಯನ್ನು ಆಯ್ಕೆ ಮಾಡಬೇಕು. ನಾನು ಬಾದಾಮಿಯಿಂದ ಶಾಸಕನಾಗಿರುವೆ. ಮುಂದೆ ಬಾದಾಮಿಯಿಂದಲೇ ಸ್ಪರ್ಧೆ ಮಾಡುತ್ತೇನೆ. ನನಗೆ ಹಲವು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವಂತೆ ಆಹ್ವಾನ ಇರುವುದು ನಿಜ ಎಂದರು.

ಇನ್ನು, ರಾಜ್ಯ ಸರ್ಕಾರದ ಕಾರ್ಯವೈಖರಿ ವಿರುದ್ದ ವಾಗ್ದಾಳಿ ನಡೆಸಿದ ಅವರು, ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸರ್ಕಾರಕ್ಕೆ ಮಾನ, ಮರ್ಯಾದೆ, ನಾಚಿಕೆ ಏನೂ ಇಲ್ಲ. ಮಾಲಿನ್ಯ ಮಂಡಳಿಯ ಅಧಿಕಾರಿಯನ್ನು ವರ್ಗಾವಣೆ ಮಾಡೋಕೆ 16 ಕೋಟಿ ಡೀಲಿಂಗ್ ಮಾಡಿದ್ದು ಸುಳ್ಳಾ? ಸರ್ಕಾರಕ್ಕೆ ಕೋವಿಡ್ ಹೆಸರಿನಲ್ಲಿ ಭ್ರಷ್ಟಾಚಾರ ಮಾಡುವುದಕ್ಕೆ ಅನುಕೂಲವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಗದಗನಲ್ಲಿ ನಕಲಿ ಬಾಬಾನಿಗೆ ಹಿಗ್ಗಾಮುಗ್ಗಾ ಗೂಸಾ.. ತಪ್ಪಾಯ್ತು ಬಿಟ್ಬಿಡಿ ಅಂತಾ ಕೈಮುಗಿದ ಚಾಲಾಕಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.