ಹುಬ್ಬಳ್ಳಿ: ಕುಡಿದ ಅಮಲಿನಲ್ಲಿ ಮಗನೇ ತಂದೆಗೆ ಚಾಕುವಿನಿಂದ ಇರಿದಿರುವ ಘಟನೆ ಕೇಶ್ವಾಪುರದ ವೆಂಕಟೇಶ ಕಾಲೋನಿಯ ಕಾಳೆ ಲೇಔಟ್ನಲ್ಲಿ ನಡೆದಿದೆ.
ಆಸ್ತಿಯಲ್ಲಿ ಪಾಲು ಕೊಡುವಂತೆ ಶ್ರೀಧರ ಎಂಬಾತ ತಂದೆ ಜೊತೆ ಆಗಾಗ ಜಗಳವಾಡುತ್ತಿದ್ದ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ರಾತ್ರಿ ತಂದೆ-ಮಗನ ನಡುವೆ ವಾಗ್ವಾದ ನಡೆದಿದ್ದು, ಕುಡಿದ ಅಮಲಿನಲ್ಲಿದ್ದ ಮಗ ತಂದೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.
ಓದಿ: 108 ವಾಹನ ಬೈಕ್ ಗೆ ಡಿಕ್ಕಿ : ಮೂವರಿಗೆ ಗಂಭೀರ ಗಾಯ
ಚಾಕು ಇರಿತದಿಂದ ಗಾಯಗೊಂಡಿರುವ ತಂದೆ ಮುದಕಪ್ಪನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಈ ಕುರಿತು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.