ETV Bharat / city

ಶಾಂತಿ, ಸೌಹಾರ್ದತೆ, ಹೊಂದಾಣಿಕೆಯೇ ಇಸ್ಲಾಂ ಧರ್ಮ.. ನ್ಯಾಯಯುತ ಹೋರಾಟ ಮಾಡಿ, ನ್ಯಾಯ ಪಡೆಯಬೇಕಿತ್ತು.. ಮುತಾಲಿಕ್ - ಹುಬ್ಬಳ್ಳಿ ಕಲ್ಲು ತೂರಾಟ ಪ್ರಕರಣ

ಇಸ್ಲಾಂ ಧರ್ಮಕ್ಕೆ ತನ್ನದೇ ಆದ ಮಹತ್ವವಿದೆ. ಶಾಂತಿ, ಸೌಹಾರ್ದತೆ, ಹೊಂದಾಣಿಕೆಗೆ ಮತ್ತೊಂದು ಹೆಸರು ಇಸ್ಲಾಂ ಧರ್ಮ. ಇಂತಹ ಧರ್ಮದ ನಿಯಮಗಳನ್ನು ಗಾಳಿಗೆ ತೂರಿ ಏಕಾಏಕಿ ಕಲ್ಲು ತೂರಾಟದಂತಹ ಹಿಂಸಾಚಾರ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ..

Sri Rama Sene chief Pramod Mutalik
ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್
author img

By

Published : Apr 17, 2022, 12:41 PM IST

ಹುಬ್ಬಳ್ಳಿ : ಇಸ್ಲಾಂ ಧರ್ಮ ಅಂದರೆ ಶಾಂತಿ, ಸೌಹಾರ್ದತೆ ಹಾಗೂ ಹೊಂದಾಣಿಕೆಯಿಂದ ಹೋಗುವಂತದ್ದು ಎಂದು ಹೇಳುತ್ತಾರೆ. ಆದರೆ, ನ್ಯಾಯಯುತವಾಗಿ ಹೋರಾಟ ಮಾಡುವ ಬದಲು ಈ ರೀತಿ ಹಿಂಸಾಚಾರ ಮಾಡಿರುವುದು ನಿಜಕ್ಕೂ ಖಂಡನೀಯ ಎಂದು ಶ್ರೀ ರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು.

ಹುಬ್ಬಳ್ಳಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯೆ ನೀಡಿರುವುದು..

ಹುಬ್ಬಳ್ಳಿ ಕಲ್ಲು ತೂರಾಟ ಪ್ರಕರಣ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ಮೆಕ್ಕಾ, ಮದೀನಾದ ಮಸೀದಿಯ ಮೇಲೆ 'ಭಗವಾ ಧ್ವಜ' ಹಾರಿಸಿರುವ ಒಂದು ವಿಡಿಯೋ ಪೋಸ್ಟ್ ಮಾಡಿದ್ದಕ್ಕೆ ಇಷ್ಟೊಂದು ಕ್ರೌರ್ಯವನ್ನು ಮೆರೆಯುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಸ್ಲಾಂ ಧರ್ಮಕ್ಕೆ ತನ್ನದೇ ಆದ ಮಹತ್ವವಿದೆ. ಶಾಂತಿ, ಸೌಹಾರ್ದತೆ, ಹೊಂದಾಣಿಕೆಗೆ ಮತ್ತೊಂದು ಹೆಸರು ಇಸ್ಲಾಂ ಧರ್ಮ. ಇಂತಹ ಧರ್ಮದ ನಿಯಮಗಳನ್ನು ಗಾಳಿಗೆ ತೂರಿ ಏಕಾಏಕಿ ಕಲ್ಲು ತೂರಾಟದಂತಹ ಹಿಂಸಾಚಾರ ಮಾಡಿರುವುದು ನಾಚಿಕೆಗೇಡಿನ ಸಂಗತಿ. ಇದನ್ನು ಶ್ರೀರಾಮಸೇನೆ ತೀವ್ರವಾಗಿ ಖಂಡಿಸುತ್ತದೆ ಎಂದರು.

ನೀವು ನ್ಯಾಯಯುತವಾಗಿ ಹೋರಾಟ ಮಾಡಿ, ನ್ಯಾಯವನ್ನು ಪಡೆದುಕೊಳ್ಳಬೇಕಿತ್ತು. ಅದನ್ನು ಬಿಟ್ಟು ಈ ರೀತಿಯಲ್ಲಿ ಗಲಾಟೆ ಮಾಡಿರುವುದು ಎಷ್ಟರಮಟ್ಟಿಗೆ ಸರಿ ಎಂದು ಗಲಾಟೆ ಮಾಡಿದ ದುಷ್ಕರ್ಮಿಗಳ ವಿರುದ್ಧ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಆಕ್ಷೇಪಾರ್ಹ ಪೋಸ್ಟ್​ನಿಂದ ಹುಬ್ಬಳ್ಳಿ ಪ್ರಕ್ಷುಬ್ಧ.. ಪೊಲೀಸ್ ಠಾಣೆ ಮುಂದೆ ಕಲ್ಲು ತೂರಾಟ, ವಾಹನಗಳು ಜಖಂ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.