ಹುಬ್ಬಳ್ಳಿ: ರಾಜ್ಯದಲ್ಲಿ ಸಂಪೂರ್ಣ ಮದ್ಯಪಾನ ನಿಷೇಧಿಸುವಂತೆ ಒತ್ತಾಯಿಸಿ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಮೌನ ಮೆರವಣಿಗೆ ನಗರದಲ್ಲಿ ನಡೆಯಿತು.
ಇಂದಿರಾ ಗಾಜಿನ ಮನೆಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಮುಖಾಂತರ ತಹಶಿಲ್ದಾರ್ ಕಚೇರಿಗೆ ಆಗಮಿಸಿ ಮದ್ಯ ನಿಷೇಧಿಸುವಂತೆ ಘೋಷಣೆ ಕೂಗಿದರು.
ನಂತರ ಮಾತನಾಡಿದ ಮದ್ಯ ನಿಷೇಧ ಆಂದೋಲನದ ಸಂಸ್ಥಾಪಕಿ ಡಾ.ವೀಣಾ ಮಾಧವ, ಕುಡಿತದ ಹಾವಳಿಯಿಂದ ಹಲವಾರು ಸಂಸಾರಗಳು ಹಾಳಾಗುತ್ತಿದ್ದು, ಹೆಣ್ಣುಮಕ್ಕಳ ಮೇಲಿನ ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಹಾಗಾಗಿ ರಾಜ್ಯ ಸರ್ಕಾರ ಬಿಹಾರ ಮಾದರಿಯಲ್ಲಿ ರಾಜ್ಯದಲ್ಲೂ ಸಂಪೂರ್ಣ ಮದ್ಯಪಾನ ನಿಷೇಧ ಮಾಡಬೇಕು ಎಂದು ಒತ್ತಾಯಿಸಿದ್ರು.
ಬಳಿಕ, ತಹಶಿಲ್ದಾರರ ಮುಖಾಂತರ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.