ಧಾರವಾಡ: ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದ್ದು, ಧಾರವಾಡದಲ್ಲಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳಿಗೆ ವೀರ ಸಾವರ್ಕರ್ ಗೆಳೆಯರ ಬಳಗ ಗುಲಾಬಿ ಹೂ, ಚಿಕ್ಕಿ ಸಿಹಿ ನೀಡಿ ವಿಶೇಷವಾಗಿ ಸ್ವಾಗತ ಕೋರಿದೆ. ಕೆಇ ಬೋರ್ಡ್ ಶಾಲೆಯ ಗೇಟ್ ಬಳಿ ವಿಶೇಷ ಸ್ವಾಗತ ಕಮಾನು ಹಾಕಿ, ರೆಡ್ ಕಾರ್ಪೆಟ್ ಹಾಸಿ ಮಕ್ಕಳಿಗೆ ಧೈರ್ಯ ತುಂಬಿ ಪರೀಕ್ಷೆಗೆ ಕಳುಹಿಸಿದರು.
ಜಿಲ್ಲೆಯಲ್ಲಿ ಒಟ್ಟು 116 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ 52, ನಗರದಲ್ಲಿ 64 ಕೇಂದ್ರಗಳನ್ನು ನಿರ್ಮಿಸಲಾಗಿದೆ. ಒಟ್ಟಾರೆ, 29,599 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, 15,144 ವಿದ್ಯಾರ್ಥಿಗಳು, 14,455 ವಿದ್ಯಾರ್ಥಿನಿಯರು ಇದ್ದಾರೆ.
ಕೋವಿಡ್ ನಿಯಮದಂತೆ ಪರೀಕ್ಷೆ ಬರೆಯಲು ಪರೀಕ್ಷಾರ್ಥಿಗಳಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಎಲ್ಲ ಕೇಂದ್ರದಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆಗೆ ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ. ಪರೀಕ್ಷಾ ಹಾಲ್ನಲ್ಲಿ ಹಿಜಾಬ್ಗೆ ಅವಕಾಶವಿಲ್ಲ. ಹಿಜಾಬ್ ಧರಿಸಿದ್ದರೆ ತೆಗೆದು ಬರುವಂತೆ ಸೂಚನೆ ನೀಡಲಾಗಿದೆ. ಪ್ರತಿ ಕೇಂದ್ರಕ್ಕೆ ಪೊಲೀಸ್ ಸಿಬ್ಬಂದಿ ನೇಮಕ ಮಾಡಿದ್ದು, ಪ್ರತಿ ಕೇಂದ್ರಕ್ಕೆ ಇಬ್ಬರು ವೈದ್ಯರನ್ನು ನಿಯೋಜನೆ ಮಾಡಲಾಗಿದೆ.
ಓದಿ: ಎಸ್ಎಸ್ಎಲ್ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಆರತಿ ಬೆಳಗಿ, ಹೂ ನೀಡಿ ಸ್ವಾಗತ