ಧಾರವಾಡ: ಕೊರೊನಾ ಸೋಂಕಿನಿಂದ ಎಸ್ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಸಾಹಿತಿ ಚನ್ನವೀರ ಕಣವಿ ಅವರ ಆಸ್ಪತ್ರೆಯ ಸಂಪೂರ್ಣ ವೆಚ್ಚವನ್ನು ಸರ್ಕಾರದಿಂದಲೇ ಭರಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
-
"ಅನಾರೋಗ್ಯಕ್ಕೆ ಒಳಗಾಗಿ ಧಾರವಾಡದ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ ಚನ್ನವೀರ ಕಣವಿ ಅವರ ಆಸ್ಪತ್ರೆ ವೆಚ್ಚ ವನ್ನು ಸರ್ಕಾರದ ವತಿಯಿಂದ ಭರಿಸಲು ನಿರ್ಧರಿಸಲಾಗಿದೆ." ಮುಖ್ಯಮಂತ್ರಿ @BSBommai pic.twitter.com/yquKCXtf0f
— CM of Karnataka (@CMofKarnataka) January 20, 2022 " class="align-text-top noRightClick twitterSection" data="
">"ಅನಾರೋಗ್ಯಕ್ಕೆ ಒಳಗಾಗಿ ಧಾರವಾಡದ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ ಚನ್ನವೀರ ಕಣವಿ ಅವರ ಆಸ್ಪತ್ರೆ ವೆಚ್ಚ ವನ್ನು ಸರ್ಕಾರದ ವತಿಯಿಂದ ಭರಿಸಲು ನಿರ್ಧರಿಸಲಾಗಿದೆ." ಮುಖ್ಯಮಂತ್ರಿ @BSBommai pic.twitter.com/yquKCXtf0f
— CM of Karnataka (@CMofKarnataka) January 20, 2022"ಅನಾರೋಗ್ಯಕ್ಕೆ ಒಳಗಾಗಿ ಧಾರವಾಡದ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ ಚನ್ನವೀರ ಕಣವಿ ಅವರ ಆಸ್ಪತ್ರೆ ವೆಚ್ಚ ವನ್ನು ಸರ್ಕಾರದ ವತಿಯಿಂದ ಭರಿಸಲು ನಿರ್ಧರಿಸಲಾಗಿದೆ." ಮುಖ್ಯಮಂತ್ರಿ @BSBommai pic.twitter.com/yquKCXtf0f
— CM of Karnataka (@CMofKarnataka) January 20, 2022
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬೊಮ್ಮಾಯಿ, ಚನ್ನವೀರ ಕಣವಿ ಅವರು ರಾಜ್ಯ ಕಂಡ ಅತ್ಯಂತ ಶ್ರೇಷ್ಠ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ. ಅವರು ಈ ರಾಜ್ಯದ ಭೌದ್ಧಿಕ ಸಂಪತ್ತಾಗಿದ್ದಾರೆ. ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾದಾಗ ಅವರಿಗೆ ಕೋವಿಡ್ ಇರುವುದು ಗೊತ್ತಾಗಿತ್ತು. ಬಳಿಕ ಆಸ್ಪತ್ರೆಯಲ್ಲಿ ನಿರಂತರವಾಗಿ ಚಿಕಿತ್ಸೆ ಮುಂದುವರಿಸಲಾಗಿದೆ. ಕಣವಿ ಅವರು ಶೀಘ್ರ ಗುಣಮುಖರಾಗಿ ಮತ್ತೆ ಸಹಜ ಜೀವನ ನಡೆಸುವಂತಾಗಿಲಿ ಎಂದು ಆಶಿಸುತ್ತೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕೋವಿಡ್ 3ನೇ ಅಲೆ ನಡುವೆ ಶಾಲೆಗಳ ಪುನಾರಂಭ... ಸೋಮವಾರದಿಂದ 1-12ನೇ ತರಗತಿ ಮಕ್ಕಳು ಶಾಲೆಗೆ!
ಅಲ್ಲದೇ, ಚನ್ನವೀರ ಕಣವಿ ಅವರ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸಲಿದೆ. ಅವರು ಗುಣಮುಖರಾಗಿ ಬರುವುದೇ ರಾಜ್ಯದ ಸೌಭಾಗ್ಯ ಎಂದು ಸಿಎಂ ಬೊಮ್ಮಾಯಿ ಬರೆದುಕೊಂಡಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ