ಹುಬ್ಬಳ್ಳಿ: ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(MES) ಪುಂಡಾಟವನ್ನು ನಾನು ಖಂಡಿಸುತ್ತೇನೆ. ಈಗಾಗಲೇ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಗರದ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಸರ್ಕಾರಿ ಆಸ್ತಿ-ಪಾಸ್ತಿಗೆ ಹಾನಿ ಮಾಡಿದ, ಪೊಲೀಸ್ ವಾಹನ ಜಖಂಗೊಳಿಸಿದವರನ್ನು ಬಂಧಿಸಲಾಗಿದೆ. ರಾಷ್ಟ್ರ ಭಕ್ತರ ಪ್ರತಿಮೆಗಳಿಗೆ ಅಪಮಾನ ಪ್ರವೃತ್ತಿ ಸಹಿಸುವುದಿಲ್ಲ. ರಾಷ್ಟ್ರ ಭಕ್ತರ ಪ್ರತಿಮೆಗಳನ್ನು ಧ್ವಂಸ ಮಾಡುವುದು ಅಪರಾಧ. ನಾಡಿನ ಹಿರಿಯ, ದೇಶಭಕ್ತರಿಗೆ ಅಪಮಾನಿಸುವ ಮೂಲಕ ಸಮಾಜದಲ್ಲಿ ಕ್ಷೋಭೆ ಉಂಟು ಮಾಡುವುದು ಸರಿಯಲ್ಲ ಎಂದರು.
ಘಟನೆಯ ಹಿಂದೆ ಅಧಿವೇಶನಕ್ಕೆ ಅಡ್ಡಿಪಡಿಸುವುದು ಮಾತ್ರವಲ್ಲ, ಇದರ ಹಿಂದೆ ಬೇರೆಯೇ ಉದ್ದೇಶವಿದೆ. ನಾವು ಇಂತಹ ಪುಂಡರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಖಡಕ್ ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ಸಂಗೊಳ್ಳಿ ರಾಯಣ್ಣ ಪುತ್ಥಳಿ ಕೆಡವಿ ಪುಂಡರ ಅಟ್ಟಹಾಸ.. ಬೆಳಗಾವಿಯಲ್ಲಿ ಪರಿಸ್ಥಿತಿ ಉದ್ವಿಗ್ನ