ಧಾರವಾಡ: ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿಗೆ ಭಾರಿ ಹಿನ್ನಡೆಯಾಗಿದೆ. ಸುಪ್ರೀಂಕೋರ್ಟ್‌ಗೆ ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.
ಸಿಬಿಐ ತನಿಖೆಗೆ ಆದೇಶಿಸಿದ್ದ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸುಪ್ರೀಂಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂಕೋರ್ಟ್‌ನಿಂದ ರಿಟ್ ಅರ್ಜಿ ವಜಾಗೊಂಡಿದೆ.
ಇದನ್ನು ಓದಿ:ಪಬ್ನಲ್ಲಿ ಕನ್ನಡ ಸಾಂಗ್ ಹಾಕದ ವಿಚಾರ: ಕ್ಷಮೆ ಕೇಳಿದ ಡಿಜೆ
ಸುದೀರ್ಘ ವಿಚಾರಣೆಗೆ ಹೈಕೋರ್ಟ್‌ಗೆ ಸುಪ್ರೀಂಕೋರ್ಟ್ ಈ ಮೊದಲು ಸೂಚಿಸಿತ್ತು. ಹೈಕೋರ್ಟ್ ಸಹ ಅರ್ಜಿ ವಜಾಗೊಳಿಸಿತ್ತು. ಹೈಕೋರ್ಟ್‌ನ ಈ ತೀರ್ಪು ಪ್ರಶ್ನಿಸಿ ಪುನಃ ವಿನಯ ಕುಲಕರ್ಣಿ ಸುಪ್ರೀಂಕೋರ್ಟ್‌ಗೆ ಹೋಗಿದ್ದರು. ಆದರೆ, ಹೈಕೋರ್ಟ್ ಆದೇಶವನ್ನು ಇಂದು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಸುಪ್ರೀಂಕೋರ್ಟ್‌ನಲ್ಲಿಯೂ ವಿನಯ್ ಕುಲಕರ್ಣಿಗೆ ಹಿನ್ನಡೆಯಾಗಿದೆ. ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಈಗಾಗಲೇ ಜಾಮೀನಿನ ಮೇಲೆ ವಿನಯ್ ಕುಲಕರ್ಣಿ ಹೊರಗಿದ್ದಾರೆ.