ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಸಧ್ಯ ನಡೆಸದಂತೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಅವಕಾಶ ಕೇಳಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಎಂಟು ತಿಂಗಳಲ್ಲಿ ಚುನಾವಣೆ ನಡೆಸುವಂತೆ ಸರ್ಕಾರಕ್ಕೆ ಸೂಚನೆ ನೀಡಿತ್ತು. ಇದನ್ನ ಪ್ರಶ್ನಿಸಿ ಬಿಜಾಪುರದ ಮೂಲದ ವ್ಯಕ್ತಿಯೊಬ್ಬರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
ಮಹಾನಗರ ಪಾಲಿಕೆಗಳಲ್ಲಿನ ವಾರ್ಡ್ ವಿಂಗಡನೆ, ಮೀಸಲಾತಿ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೇಟ್ಟಿಲೇರಿರುವ ಪರಿಣಾಮ ಅರ್ಜಿ ಪರಿಶೀಲನೆ ನಡೆಸಿದ ಸುಪ್ರೀಂಕೋರ್ಟ್ ಚುನಾವಣೆ ನಡೆಸದಂತೆ ತಡೆಯಾಜ್ಞೆ ನೀಡಿದೆ. ಇದರಿಂದ ಚುನಾವಣೆ ನಡೆಯುವುದು ಅನುಮಾನವಾಗಿದೆ. ಹೀಗಾಗಲೇ ಮಹಾನಗರ ಪಾಲಿಕೆಯಲ್ಲಿ ಕಳೆದ ಮೂರು ವರ್ಷದಿಂದಲೂ ಚುನಾವಣೆ ಇಲ್ಲದೇ ಅಧಿಕಾರಿಗಳ ಮೇಲೆ ಆಡಳಿತ ನಡೆಯುತ್ತಿರುವುದು ವಿಶೇಷವಾಗಿದೆ.
ಇದನ್ನು ಓದಿ:ಹು-ಧಾ ಪಾಲಿಕೆ ವಾರ್ಡ್ ಮರು ವಿಂಗಡಣೆ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ