ಧಾರವಾಡ : ಪಿಡಿಒ ಹಾಗೂ ಸಿಬ್ಬಂದಿ ಗ್ರಾಮದ ಅಭಿವೃದ್ಧಿಗೆ ಸಹಕಾರ ನೀಡುತ್ತಿಲ್ಲವೆಂದು ಆರೋಪಿಸಿ ಗ್ರಾಪಂ ಸದಸ್ಯರು ನಿನ್ನೆ ಪಂಚಾಯತ್ ಕಚೇರಿ ಆವರಣದಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದಾರೆ.
ಧಾರವಾಡ ತಾಲೂಕಿನ ತಡಕೋಡ ಗ್ರಾಪಂ ಸದಸ್ಯರುಗಳು, ಪಂಚಾಯತ್ ಅಭಿವೃದ್ದಿ ಅಧಿಕಾರಿ ಮತ್ತು ಸಿಬ್ಬಂದಿ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುತ್ತಿಲ್ಲ ಎಂದು ದೂರಿದ್ದಾರೆ.
ಹತ್ತಕ್ಕೂ ಹೆಚ್ಚು ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರು ಜಂಟಿಯಾಗಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಅಹೋರಾತ್ರಿ ಧರಣಿ ನಡೆಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಂಚಾಯತ್ ಸಿಬ್ಬಂದಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಸರಿಯಾದ ಸಮಯಕ್ಕೆ ಗ್ರಾಮಸ್ಥರಿಗೆ ತಲುಪಿಸುತ್ತಿಲ್ಲ. ಇದರ ಕುರಿತು ಹಲವು ಬಾರಿ ಪಿಡಿಒ, ಅಧಿಕಾರಿಗಳ ಗಮನಕ್ಕೆ ಸದಸ್ಯರು ತಂದರು ಕೂಡ ಯಾವುದೇ ಕ್ರಮವನ್ನು ಸಿಬ್ಬಂದಿ ಮೇಲೆ ಕೈಗೊಳ್ಳುತ್ತಿಲ್ಲ.
ಇದನ್ನೂ ಓದಿ: 45 ಕಾರ್ಮಿಕರ ವಜಾ, 16 ಮಂದಿಗೆ ಅಮಾನತು ಶಿಕ್ಷೆ ವಿಧಿಸಿದ ಟೊಯೋಟಾ ಕಂಪನಿಯ ಆಡಳಿತ ಮಂಡಳಿ
ಈ ಕುರಿತು ಸದಸ್ಯರು ಲಿಖಿತವಾಗಿ ಮನವಿ ನೀಡಿದ್ದರೂ ನಿರ್ಲಕ್ಷ್ಯ ತೋರಲಾಗುತ್ತಿದೆ. ಅಲ್ಲದೇ ಪಿಡಿಒ ಗ್ರಾಮದ ಅಭಿವೃದ್ಧಿಗೆ ಸಹಕಾರ ನೀಡುತ್ತಿಲ್ಲ ಎಂದು ಪಂಚಾಯತ್ ಸದಸ್ಯರು ಸೇರಿದಂತೆ ಗ್ರಾಮಸ್ಥರು ಆರೋಪಿಸಿದ್ದಾರೆ. ಪಿಡಿಒ, ಸಿಬ್ಬಂದಿ ಬದಲಾವಣೆಗೆ ಪಟ್ಟು ಹಿಡಿದಿದ್ದಾರೆ.