ಹುಬ್ಬಳ್ಳಿ: ನೂತನ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮುಕ್ತ ಚರ್ಚೆಗೆ ಸರ್ಕಾರ ಒಳಪಡಿಸುವಂತೆ ಎಸ್.ಐ.ಓ ಸಂಘಟನೆಯ ಅಧ್ಯಕ್ಷ ಮಹಮ್ಮದ ಪೀರ ಒತ್ತಾಯಿಸಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಲೋಕಸಭೆ ಮತ್ತು ರಾಜ್ಯ ಸಭೆಯಲ್ಲಿ ಯಾವುದೇ ರೀತಿ ಚರ್ಚೆ ನಡಸದೇ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡು ಜಾರಿ ಮಾಡಲು ಹೊರಟಿರುವ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದರು.
ಶಿಕ್ಷಣ ನೀತಿಯಲ್ಲಿ ಹಲವಾರು ಗೊಂದಲಗಳಿವೆ, ಅದಕ್ಕೆ ಸ್ಪಷ್ಟೀಕರಣ ನೀಡದೇ ಏಕಾಏಕಿ ಜಾರಿಗೆ ತರುತ್ತಿರುವುದು ಖಂಡನೀಯ, ಆದ್ದರಿಂದ ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.