ಹುಬ್ಬಳ್ಳಿ: ಉಪಚುನಾವಣೆ ನಂತರ ಬಹುಮತ ಬಂದರೆ ಸರ್ಕಾರ ರಚಿಸುತ್ತೇವೆ ಎಂದು ಮಾತ್ರ ಹೇಳಿದ್ದೇನೆಯೇ ಹೊರತು, ಸಿಎಂ ಆಗುತ್ತೇನೆ ಅಂತ ಹೇಳಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗುವ ಹುಚ್ಚು ಹಿಡಿದೆ ಎಂಬ ಸಚಿವ ಕೆ.ಎಸ್ ಈಶ್ವರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ. ಬಾಯಿಗೆ ಬಂದ ಹಾಗೆ ಮಾತನಾಡುತ್ತಾರೆ. ಬಿಜೆಪಿಯವರು ಹಿಂಬಾಗಿಲಿನಿಂದ ಬಂದು ಅಧಿಕಾರದ ಗದ್ದುಗೆ ಏರಿದವರು ಎಂದು ತಿರುಗೇಟು ನೀಡಿದರು.
ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಜನರು ಯಾವ ತೀರ್ಪು ನೀಡಲಿದ್ದಾರೆ ಎಂದು ನೋಡೋಣ. ಆದರೆ ಜೆಡಿಎಸ್ನೊಂದಿಗೆ ಮೈತ್ರಿ ಇಲ್ಲ ಎಂದು ಸ್ಪಷ್ಟಪಡಿಸಿದರು.