ಹುಬ್ಬಳ್ಳಿ/ಕಾರವಾರ: ಮುಂಡಗೋಡದಿಂದ ಹುಬ್ಬಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಹುಲಿಯೊಂದು ಪ್ರತ್ಯಕ್ಷವಾಗಿ ಕೆಲಕಾಲ ಪ್ರಯಾಣಿಕರಲ್ಲಿ ಭೀತಿ ಮೂಡಿಸಿದ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಸಮೀಪ ಕಾಣಿಸಿಕೊಂಡ ಹುಲಿ, ರಸ್ತೆಯಲ್ಲಿ ನಡೆದಾಡಿಕೊಂಡು ಹೋಗುತ್ತಿದ್ದ ದೃಶ್ಯ ಮೊಬೈಲ್ನಲ್ಲಿ ಸೆರೆ ಹಿಡಿಯಲಾಗಿದೆ. ಆ ರಸ್ತೆಯಲ್ಲಿ ಕಾರಿನಲ್ಲಿ ಹೋಗುತ್ತಿದ್ದವರು, ತಮ್ಮ ಮೊಬೈಲ್ನಲ್ಲಿ ಹುಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುವ ದೃಶ್ಯವನ್ನು ಸೆರೆಹಿಡಿದಿದ್ದಾರೆ. ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಅದನ್ನ ಹರಿ ಬಿಟ್ಟಿದ್ದಾರೆ.
ಮುಂಡಗೋಡ ಅರಣ್ಯ ಪ್ರದೇಶದಲ್ಲಿ ಆಗಾಗ ಹುಲಿಗಳು ಕಂಡು ಬರುತ್ತಿವೆ. ಇದೇ ಹುಲಿಯ ಬಿಂದಾಸ್ ಓಡಾಟ ಕಂಡ ಪ್ರಯಾಣಿಕರು ಹಾಗೂ ಸ್ಥಳೀಯರು ಭಯಭೀತಗೊಂಡಿದ್ದರು.