ಹುಬ್ಬಳ್ಳಿ: ಗದಗ, ಹುಬ್ಬಳ್ಳಿ ಮತ್ತು ಹಾವೇರಿಯಲ್ಲಿ ನಾಳೆಯಿಂದ (ಫೆ.13) ಕಾಂಗ್ರೆಸ್ ವತಿಯಿಂದ ಡಿಜಿಟಲ್ ಸದಸ್ಯತ್ ಅಭಿಯಾನ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಒಟ್ಟು 1.20 ಲಕ್ಷ ಬೂತ್ ಸೇರಿ 50 ಲಕ್ಷ ಸದಸ್ಯತ್ವ ನೋಂದಣಿ ಮಾಡುವ ಗುರಿ ಇದೆ. ಪಕ್ಷದ ನಾಯಕರು ಹಾಗೂ ಸದಸ್ಯರು ಈ ಅಭಿಯಾನದಲ್ಲಿ ಭಾಗವಹಿಸಬೇಕು. ಡಿಜಿಟಲ್ ಸದಸ್ಯತ್ವ ಅಭಿಯಾನದ ಸದಸ್ಯತ್ವಕ್ಕೆ 5 ರೂಪಾಯಿ ಶುಲ್ಕ ಇರಲಿದೆ ಎಂದರು.
ಪ್ರತಿ ಮನೆಮನೆಗೆ ತೆರಳಿ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ತತ್ವ ಸಿದ್ದಾಂತಗಳ ಬಗ್ಗೆ ಮಾಹಿತಿ ತಿಳಿಸುವರು. ಆಡಳಿತಾರೂಢ ಬಿಜೆಪಿ ವೈಫಲ್ಯದ ಬಗ್ಗೆ ಮನದಟ್ಟು ಮಾಡಿಕೊಡಲಿದ್ದಾರೆ. ಫೆ.14ರ ನಂತರ ನಡೆಯುವ ಅಧಿವೇಶನದಲ್ಲಿ ಬಿಜೆಪಿ ದುರಾಡಳಿತದ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಲಾಗುವುದು ಎಂದರು.
ಓದಿ: ಹಿಜಾಬ್-ಕೇಸರಿ ಶಾಲು ವಿವಾದ : ಶಾಸಕ ರಘುಪತಿ ಭಟ್‌ಗೆ ಬೆದರಿಕೆ ಕರೆ ಬರ್ತಿವೆಯಂತೆ