ಧಾರವಾಡ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ಸಂಚಾರ ಪೊಲೀಸ್ ವಿಭಾಗ ಹುಬ್ಬಳ್ಳಿ-ಧಾರವಾಡ ವತಿಯಿಂದ 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹವನ್ನು ಸಂಚಾರ ವಿಭಾಗದ ಎಡಿಜಿಪಿ ಪಿ.ಎಸ್.ಸಂಧು ಉದ್ಘಾಟಿಸಿದರು.
ನಗರದ ಡಾ. ಮಲ್ಲಿಕಾರ್ಜುನ ಮನಸೂರ ಕಲಾಭವನದಲ್ಲಿ ನಡೆದ ಕಾರ್ಯಕ್ರಮವನ್ನು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಲಾಯಿತು. ಸಪ್ತಾಹದಲ್ಲಿ ಭಾಗವಹಿಸಿದ ಜನರಿಂದ ಸಂಚಾರ ನಿಯಮಗಳ ಫಲಕಕ್ಕೆ ಸಹಿ ಸಂಗ್ರಹಿಸುವ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.