ಹುಬ್ಬಳ್ಳಿ : ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಸೋಂಕಿತರ ಮನೆಯ ಪ್ರದೇಶದಲ್ಲಿ ಸ್ಯಾನಿಟೈಸರ್ ಮಾತ್ರ ಮಾಡಲಾಗಿದೆ. ಆದರೆ, ಮುಂಜಾಗ್ರತಾ ಕ್ರಮವಾಗಿ ಸೀಲ್ಡೌನ್ ಮಾಡಿಲ್ಲ.
ಹುಬ್ಬಳ್ಳಿಯ ಗೋಕುಲ್ ರಸ್ತೆಯ ವಾಯವ್ಯ ಸಾರಿಗೆ ಸಂಸ್ಥೆಯ ನೌಕರನಿಗೆ ಕೊರೊನಾ ದೃಢವಾಗಿದೆ. ಈತ ವಸತಿ ಗೃಹದಲ್ಲಿ ವಾಸವಿದ್ದರು. ಈ ಹಿಂದೆ ಕೊರೊನಾ ಸೋಂಕಿತರ ಮನೆಯ 100 ಮೀಟರ್ ಪ್ರದೇಶವನ್ನು ಸೀಲ್ಡೌನ್ ಮಾಡಲಾಗುತಿತ್ತು. ಆದರೆ, ಈಗ ಸೀಲ್ಡೌನ್ ಮಾಡದೇ ಇರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.
ವಸತಿ ಗೃಹಗಳಲ್ಲಿ ವಾಸವಿದ್ದ 60ಕ್ಕೂ ಹೆಚ್ಚು ಚಾಲಕ, ನಿರ್ವಾಹಕರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ.