ಹುಬ್ಬಳ್ಳಿ: ಹೈದರಾಬಾದ್ನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಐರಾವತ್ ಬಸ್ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಬಳಿ ಈ ದುರ್ಘಟನೆ ನಡೆದಿದೆ.
ಶಿರಗುಪ್ಪಿ ಬಳಿಯ ರಸ್ತೆಯ ಮೊದಲ ತಿರುವಿನಲ್ಲಿಯೇ ರಾಂಗ್ ರೂಟಿಗೆ ಐರಾವತ್ ಬಸ್ ಬಂದಿದ್ದರಿಂದ ಎದುರಿಗೆ ಬಂದಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬಸ್ನ ವೇಗ ಹೆಚ್ಚಾಗಿದ್ದರಿಂದ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಮೃತರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಘಟನೆಗೆ ಐರಾವತ್ ಬಸ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಗಾಯಾಳುಗಳನ್ನ ಸ್ಥಳೀಯರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಇದನ್ನೂ ಓದಿ: ಗುಂಡ್ಲುಪೇಟೆ ಬಳಿ ಹೈದರಾಬಾದ್ ಪ್ರವಾಸಿಗರ ಕಾರು ಡಿಕ್ಕಿ; ಮಹಿಳೆ ಸಾವು, ಹಲವರಿಗೆ ಗಾಯ