ಹುಬ್ಬಳ್ಳಿ : ಹುಬ್ಬಳ್ಳಿ ನಗರದಲ್ಲಿ ನಿನ್ನೆ ದೆಹಲಿ ಪ್ರಯಾಣದ ಹಿನ್ನೆಲೆ ಹೊಂದಿರುವ 27 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಸೋಂಕಿತ ಮುಲ್ಲಾ ಓಣಿಯ ನಿವಾಸಿಯಾಗಿದ್ದು, ಇದೀಗ ಆತನ ಜೊತೆ ಸಂಪರ್ಕದಲ್ಲಿದ್ದ ಮತ್ತಿಬ್ಬರನ್ನು ಹೋಂ ಕ್ವಾರಂಟೈನ್ಗೆ ಕಳುಹಿಸಲಾಗಿದೆ.
ಸೋಂಕಿತನ ಫುಟ್‌ವೇರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರನ್ನು ಕಮರಿಪೇಟೆ ಪೊಲೀಸರು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಕಿಮ್ಸ್ ವೈದ್ಯರು ಇಬ್ಬರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಿದ್ದಾರೆ. ಇದೀಗ ಜಿಲ್ಲಾಡಳಿತ ಪಾಸಿಟಿವ್ ವ್ಯಕ್ತಿಯ ಟ್ರಾವೆಲ್ ಹಿಸ್ಟರಿಯನ್ನು ಸರ್ಚ್ ಮಾಡುತ್ತಿದೆ.