ಧಾರವಾಡ: ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡದ ಕೆ ಸಿ ಪಾರ್ಕ್ ಬಳಿ ಸಂಭವಿಸಿದೆ. ಅತೀವಾದ ವೇಗವೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.
ಮೃತ ಯುವಕರನ್ನು ಫರ್ಹಾನ್ ಹಾಗೂ ಮತೀನ್ ಎಂದು ಗುರುತಿಸಲಾಗಿದೆ. ಅತೀ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದ ಇವರು ಮೊದಲಿಗೆ ಹಿಂಭಾಗದಿಂದ ಕಾರಿಗೆ ಡಿಕ್ಕಿ ಹೊಡೆದು, ನಂತರ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಇಬ್ಬರ ತಲೆಗೆ ಬಲವಾದ ಪೆಟ್ಟು ಬಿದ್ದು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ದೂರು ದಾಖಲಿಸಿಕೊಂಡಿದ್ದಾರೆ.
(ಇದನ್ನೂ ಓದಿ: ಭೀಕರ ಅಪಘಾತದಲ್ಲಿ ಹೊತ್ತಿ ಉರಿದ ಕಾರು; ದಂಪತಿ ಸೇರಿ ಮೂವರು ಸಜೀವ ದಹನ)