ETV Bharat / city

ಹುಬ್ಬಳ್ಳಿಯಲ್ಲಿ ಯುಗಾದಿ ಸಂಭ್ರಮ.. ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ‌ ಶಿವಲಿಂಗ ಸ್ಪರ್ಶಿಸಿದ ಸೂರ್ಯ ರಶ್ಮಿ - ugadi festival celebration in hubballi

ಹುಬ್ಬಳ್ಳಿಯ ಉಣಕಲ್ ನ ಚಂದ್ರಮೌಳೇಶ್ವರ ದೇವಸ್ಥಾನದಲ್ಲೂ ಯುಗಾದಿ ಸಂಭ್ರಮ ಮನೆ ಮಾಡಿದೆ. ಮುಂಜಾನೆಯ ಸೂರ್ಯ ರಶ್ಮಿ ಶಿವಲಿಂಗವನ್ನು ಸ್ಪರ್ಶಿಸುವ ಘಳಿಗೆಯನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ.

ugadi-celebration-in-chandramouleshwara-temple-hubballi
ವಾಣಿಜ್ಯ ನಗರಿಯಲ್ಲಿ ಯುಗಾದಿ ಸಂಭ್ರಮ: ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ‌ ಶಿವಲಿಂಗ ಸ್ಪರ್ಶಿಸಿದ ಸೂರ್ಯ ರಶ್ಮಿ
author img

By

Published : Apr 2, 2022, 9:25 AM IST

Updated : Apr 2, 2022, 2:30 PM IST

ಹುಬ್ಬಳ್ಳಿ : ರಾಜ್ಯದಲ್ಲಿ ಹೊಸ ವರ್ಷ ಯುಗಾದಿಯ ಸಂಭ್ರಮ ಕಳೆಗಟ್ಟಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಯುಗಾದಿ ಹಬ್ಬದ ಸಡಗರ ಮನೆ ಮಾಡಿದೆ. ಯುಗಾದಿ ಹಿನ್ನೆಲೆಯಲ್ಲಿ ದೇವಾಲಯಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದೆ. ನಗರದ ಪ್ರಮುಖ ದೇವಾಲಯಗಳಲ್ಲಿ ಸರದಿ ಸಾಲಿನಲ್ಲಿ ನಿಂತು ಭಕ್ತರು ದೇವರ ದರ್ಶನ ಪಡೆಯುತ್ತಿದ್ದಾರೆ. ಇಲ್ಲಿನ ಉಣಕಲ್ ನ ಚಂದ್ರಮೌಳೇಶ್ವರ ದೇವಸ್ಥಾನದಲ್ಲೂ ಯುಗಾದಿ ಸಂಭ್ರಮ ಕಳೆಗಟ್ಟಿದೆ.

ಹುಬ್ಬಳ್ಳಿಯಲ್ಲಿ ಯುಗಾದಿ ಸಂಭ್ರಮ, ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ‌ ಶಿವಲಿಂಗ ಸ್ಪರ್ಶಿಸಿದ ಸೂರ್ಯ ರಶ್ಮಿ

ಇಂದು ಮುಂಜಾನೆಯ ಸೂರ್ಯ ರಶ್ಮಿ ಶಿವಲಿಂಗವನ್ನು ಸ್ಪರ್ಶಿಸುವ ಘಳಿಗೆಯನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ. ಶತಮಾನಗಳಷ್ಟು ಹಳೆಯದಾದ ಚಂದ್ರಮೌಳೇಶ್ವರನ ದರ್ಶನ ಪಡೆದರೆ ಇಷ್ಟಾರ್ಥಗಳು ಈಡೇರುತ್ತದೆ ಎಂಬ ನಂಬಿಕೆ ಇಲ್ಲಿನ ಜನರದ್ದಾಗಿದೆ. ಈ ಹಿನ್ನೆಲೆಯಲ್ಲಿ ಯುಗಾದಿ ದಿನದಂದು ದೇವಸ್ಥಾನಕ್ಕೆ ಭೇಟಿ ನೀಡಿ ಸೂರ್ಯ ರಶ್ಮಿ ಶಿವಲಿಂಗ ಸ್ಪರ್ಶಿಸುವುದರ ದರ್ಶನ ಪಡೆಯುತ್ತಾರೆ.

ಇದು 12 ನೇ ಶತಮಾನದಲ್ಲಿ ಚಾಲುಕ್ಯರ ಕಾಲದಲ್ಲಿ ಕಟ್ಟಲಾದ ದೇವಸ್ಥಾನವಾಗಿದ್ದು, ಚತುರ್ಮುಖ ಶಿವಲಿಂಗ ಇಲ್ಲಿನ ವಿಶೇಷವಾಗಿದೆ. ಯುಗಾದಿ ಹಬ್ಬದ ದಿನ ಬೆಳಗ್ಗೆ 6-45 ರಿಂದ 7 ಗಂಟೆಯವರೆಗೆ ಈ ಚತುರ್ಮುಖ ಲಿಂಗದ ಮೇಲೆ ಸೂರ್ಯರಶ್ಮಿ ಬೀಳುವುದು ವಿಶೇಷವಾಗಿದೆ. ಈ ಸಂದರ್ಭದಲ್ಲಿ ಅನೇಕ ಭಕ್ತರು ದೇವರ ದರ್ಶನ ಪಡೆದು ಧನ್ಯರಾಗುತ್ತಾರೆ. ಇದಾದ ಬಳಿಕ ಭಕ್ತರು ಬೇವು-ಬೆಲ್ಲ ಸವಿದು ಯುಗಾದಿ ಹಬ್ಬವನ್ನು ಆಚರಿಸುತ್ತಾರೆ.

ಓದಿ : ಶೋರೂಮ್​​ನಲ್ಲಿ ಅಗ್ನಿ ಅವಘಡ: 40ಕ್ಕೂ ಹೆಚ್ಚು ರಾಯಲ್ ಎನ್ ಫೀಲ್ಡ್ ಬೈಕ್ ಬೆಂಕಿಗಾಹುತಿ

Last Updated : Apr 2, 2022, 2:30 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.