ಧಾರವಾಡ: ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಹಂಸಭಾವಿ ಗ್ರಾಮದ ದುರ್ಗದ ಅನುದಾನರಹಿತ ಶಾಲೆಯಲ್ಲಿ ಕಳೆದ 20 ವರ್ಷಗಳಿಂದ ಕೆಲಸ ಮಾಡುತ್ತಿರುವ ಸಿಬ್ಬಂದಿ ಮಕ್ಬುಲ್ ಅಹ್ಮದ್ ಜಮಖಂಡಿ ಕಡಿಮೆ ವೇತನದ ಬಗ್ಗೆ ನೋವು ತೋಡಿಕೊಂಡಿದ್ದಾರೆ.
ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ವೇಳೆ ಮಕ್ಬುಲ್ ತಮ್ಮ ಸಮಸ್ಯೆ ಹೇಳಿಕೊಂಡರು. ಕಳೆದ 20 ವರ್ಷದಿಂದ ಕೆಲಸ ಮಾಡುತ್ತಿದ್ದೇನೆ. ಕೇವಲ 6 ಸಾವಿರ ಮಾತ್ರ ವೇತನ ಕೊಡುತ್ತಾರೆ. ಮಕ್ಕಳು ಹತ್ತು ರೂಪಾಯಿ ಕೇಳಿದರೂ ಕೊಡಲು ನನ್ನ ಬಳಿ ಹಣ ಇರೋದಿಲ್ಲ ಎಂದು ಮಾಧ್ಯಮದ ಮುಂದೆ ನೋವು ಹೊರಹಾಕಿದರು.
ಓದಿ: ಪೇಟಿಎಂ ಮುಖೇನ ಸಿಲಿಂಡರ್ ಬುಕ್ ಮಾಡಿದ್ರೆ 500 ರೂ. ಕ್ಯಾಶ್ಬ್ಯಾಕ್!
ಈ ಶಿಕ್ಷಕನ ಸಮಸ್ಯೆ ಆಲಿಸಿದ ಮಾಜಿ ಶಾಸಕ ಕೊನರೆಡ್ಡಿ, ಸರ್ಕಾರ ಶಿಕ್ಷಕರ ಕಣ್ಣಲ್ಲಿ ನೀರು ಹಾಕಿಸುವ ಕೆಲಸ ಮಾಡಬಾರದು. ಸರ್ಕಾರ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ಶಿಕ್ಷಕರ ನೆರವಿಗೆ ಬರಬೇಕೆಂದು ಆಗ್ರಹಿಸಿ ಹೋರಾಟ ನಡೆಯುತ್ತಿದೆ. ಮುಂಬರುವ ದಿನಗಳಲ್ಲಿ ಈ ಸಮಸ್ಯೆಯನ್ನು ಸರ್ಕಾರ ಹೇಗೆ ಬಗೆಹರಿಸುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ ಎಂದರು.