ಹುಬ್ಬಳ್ಳಿ: ಉತ್ತರ ಕರ್ನಾಟಕದ ಹೆಬ್ಬಾಗಿಲೆಂದೇ ಖ್ಯಾತಿ ಪಡೆದ ಹುಬ್ಬಳ್ಳಿಯಲ್ಲಿ ಜನಪ್ರಿಯತೆ ಪಡೆದ ಉಣಕಲ್ ಕೆರೆಗೆ ಒಂದಿಲ್ಲೊಂದು ರೀತಿಯಲ್ಲಿ ಜಲಕಳೆ ಸಮಸ್ಯೆ ತಲೆದೋರಿದೆ. ಈಗ ಸ್ಮಾರ್ಟ್ ಸಿಟಿ ಯೋಜನೆ ಮೂಲಕ ಉಣಕಲ್ ಕೆರೆ ಮತ್ತಷ್ಟು ಸ್ಮಾರ್ಟ್ ಆಗಿ ಮಿಂಚಲಿದೆ.
ಈ ಹಿಂದಿನ ದಿನಗಳಲ್ಲಿ ಉಣಕಲ್ ಕೆರೆಯ ಪರಿಸ್ಥಿತಿ ನೋಡಿದ ಅದೆಷ್ಟೋ ಯುವಕರು ಸ್ವಯಂಪ್ರೇರಿತರಾಗಿ ಜಲಕಳೆ ತೆಗೆಯುವ ಕಾರ್ಯಕ್ಕೆ ಮುಂದಾಗಿದ್ದರು. ಅಲ್ಲದೇ ಹಲವು ಬಾರಿ ತೆರವು ಕಾರ್ಯಾಚರಣೆಯನ್ನೂ ನಡೆಸಿದ್ದರು. ಆದರೂ ಕೂಡಾ ಜಲಕಳೆಯ ಸಂಪೂರ್ಣ ನಿಯಂತ್ರಣ ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಿಂದಲೇ ಈಗ ಉಣಕಲ್ ಕೆರೆಯ ಸ್ವಚ್ಛತೆ ನಡೆಯುತ್ತಿದೆ.
ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿ, ಜಲಕಳೆಗೆ ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಈ ಕೆರೆಯನ್ನು ಅಭಿವೃದ್ಧಿಪಡಿಸುತ್ತಿದ್ದು, ಕೆಲವೇ ದಿನಗಳಲ್ಲಿ ಉಣಕಲ್ ಕೆರೆ ಸ್ಮಾರ್ಟ್ ಆಗಲಿದೆ ಎಂದು ಹೇಳಿದರು.