ಹುಬ್ಬಳ್ಳಿ : ಕೊರೊನಾ ನಿಯಂತ್ರಣಕ್ಕೆ ರಾಜ್ಯದಲ್ಲಿ ಲಾಕ್ಡೌನ್ ಅವಶ್ಯಕತೆ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ಕೊರೊನಾ ನಿಯಂತ್ರಣಕ್ಕೆ ಲಾಕ್ಡೌನ್ ಒಂದೇ ಪರಿಹಾರವಲ್ಲ. ಏಪ್ರಿಲ್ 17ರ ನಂತರ ರಾಜ್ಯದಲ್ಲಿ ಲಾಕ್ಡೌನ್ ಮಾಡುವ ಯಾವುದೇ ಸಾಧ್ಯತೆಗಳಿಲ್ಲ. ರಾಜ್ಯದ ಜನ ಸರ್ಕಾರದ ನಿರ್ದೇಶನಗಳನ್ನು ಪಾಲನೆ ಮಾಡುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಮುಂದಾಗಬೇಕು. ಜನತೆ ಕೊರೊನಾ ಕುರಿತಂತೆ ಜಾಗೃತಿ ವಹಿಸಬೇಕು ಎಂದರು.
ಸಾರಿಗೆ ನೌಕರರ ಮುಷ್ಕರ 8ನೇ ದಿನಕ್ಕೆ ಮುಂದುವರಿಕೆ ಹಿನ್ನೆಲೆ ಈ ಬಗ್ಗೆ ಸರ್ಕಾರ ಮಾತುಕತೆಗೆ ಸಿದ್ಧವಿದೆ. ಸಾರಿಗೆ ನೌಕರರು ಕೂಡಲೇ ಕರ್ತವ್ಯಕ್ಕೆ ಹಾಜರಾಗಬೇಕು. ಇದು ಮುಷ್ಕರ ಮಾಡುವ ಸಮಯವಲ್ಲ. ಏನೇ ಸಮಸ್ಯೆ ಇದ್ದರೂ ಮಾತುಕತೆ ಮಾಡುವ ಮೂಲಕ ಬಗೆಹರಿಸಬೇಕು. ಮುಷ್ಕರದಿಂದಾಗಿ ರಾಜ್ಯದ ಜನತೆಗೆ ತೊಂದರೆಯಾಗುತ್ತಿದೆ. ನೌಕರರು ಅದನ್ನ ಗಮನದಲ್ಲಿಟ್ಟುಕೊಳ್ಳಬೇಕು ಎಂದರು.
ಸೋಲಿನ ಭಯ ಇರುವುದರಿಂದ ಸಿಎಂ ಪದೇಪದೆ ಆಗಮಿಸುತ್ತಿದ್ದಾರೆಂದ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರ ಸರಿಯಲ್ಲ. ಅವರು ಕೇವಲ ಎರಡೇ ಬಾರಿ ಬೆಳಗಾವಿಗೆ ಬಂದು ಪ್ರಚಾರ ಮಾಡಿದ್ದಾರೆ. ರಾಜ್ಯದಲ್ಲಿ ಮೂರು ಕಡೆಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಸತೀಶ್ ಜಾರಕಿಹೊಳಿ ಗೆಲುವಿನ ಭ್ರಮೆಯಲ್ಲಿದ್ದಾರೆ ಎಂದರು.
ಓದಿ: ಪೌರ ಕಾರ್ಮಿಕರಿಗೆ 9.34 ಕೋಟಿ ರೂ. ವೆಚ್ಚದಲ್ಲಿ ಸಮವಸ್ತ್ರ ಸೇರಿ ಅಗತ್ಯವಸ್ತುಗಳ ವಿತರಣೆ