ಹುಬ್ಬಳ್ಳಿ: ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ತಮ್ಮ ಮಗಳ ಮದುವೆ ಸಮಾರಂಭದಲ್ಲಿ ಪತ್ನಿಯೊಂದಿಗೆ ಡಾ. ರಾಜಕುಮಾರ್ ಅಭಿನಯದ ಎರಡು ಕನಸು ಚಿತ್ರದ 'ಎಂದೆಂದೂ ನಿನ್ನನು ಮರೆತು ಬದುಕಿರಲಾರೆ' ಹಾಡಿಗೆ ಹೆಜ್ಜೆ ಹಾಕಿದ್ದಾರೆ.
ಬುಧವಾರ ರಾತ್ರಿ ವಾಣಿಜ್ಯನಗರಿಯಲ್ಲಿ ನಡೆದ ಪುತ್ರಿ ಅರ್ಪಿತಾ ಹಾಗೂ ಹೃಷಿಕೇಶ್ ಅವರ ಆರತಕ್ಷತೆ ಕಾರ್ಯಕ್ರಮದಲ್ಲಿ ಜೋಶಿ ದಂಪತಿ ವೇದಿಕೆ ಮೇಲೆ ಡ್ಯಾನ್ಸ್ ಮಾಡಿ ಮನರಂಜಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.
ಇದನ್ನೂ ಓದಿ: ಕೇಂದ್ರ ಸಚಿವರ ಮಗಳ ವಿವಾಹದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ
ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್, ಸಭಾಪತಿ ಬಸವರಾಜ್ ಹೊರಟ್ಟಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸಚಿವ ಆರ್ ಅಶೋಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಹಾಲಪ್ಪ ಆಚಾರ್, ಶಂಕರ್ ಪಾಟೀಲ್ ಮುನೇನಕೊಪ್ಪ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.