ಹುಬ್ಬಳ್ಳಿ: ಡಿ ಕಂಟ್ರೋಲ್ ಆಗಿದ್ದ ಪೆಟ್ರೋಲ್ ಹಾಗು ಡೀಸೆಲ್ ಬೆಲೆಯನ್ನು ಕೇಂದ್ರ ಸರ್ಕಾರ ಜನಕ್ಕೆ ತೊಂದರೆಯಾಗಬಾರದೆಂಬ ದೃಷ್ಟಿಯಿಂದ ಕಡಿಮೆಗೊಳಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಬೆಲೆಗಳನ್ನು ಗಮನದಲ್ಲಿಟ್ಟುಕೊಂಡು, ಇದೀಗ ಪರಿಸ್ಥಿತಿಗೆ ಅನುಗುಣವಾಗಿ ರಾಜ್ಯದಲ್ಲಿ ಒಟ್ಟಾರೆಯಾಗಿ ಪೆಟ್ರೋಲ್ ಬೆಲೆಯಲ್ಲಿ 12 ರೂ., ಹಾಗು ಡೀಸೆಲ್ ಮೇಲಿನ 17 ರೂ. ಕಡಿಮೆ ಮಾಡಿದ್ದೇವೆ ಎಂದು ತಿಳಿಸಿದರು.
ರಾಜ್ಯ ಸರ್ಕಾರ 100 ದಿನ ಪೂರೈಸಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಉತ್ತಮ ಕೆಲಸ ನಡೆಯುತ್ತಿದೆ. ಈ ಸರ್ಕಾರ ಪೂರ್ಣ ಅವಧಿ ಮುಗಿಸುವುದರಲ್ಲಿ ಎರಡು ಮಾತಿಲ್ಲ. ಮುಂದಿನ ಅವಧಿ ಕೂಡಾ ಬಿಜೆಪಿ ಸರ್ಕಾರದ ಅವಧಿಯಾಗಲಿದೆ ಎಂದು ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: ಇಂಧನ ದರ ಇಳಿಕೆಗೆ ಬಿಎಸ್ವೈ ಮೆಚ್ಚುಗೆ: ಬೆಲೆ ಇಳಿದರೂ ನೆಟ್ಟಿಗರಿಂದ ಟೀಕೆಗೊಳಗಾದ ಸರ್ಕಾರ