ETV Bharat / city

ಹುಬ್ಬಳ್ಳಿ: ವಿದ್ಯಾರ್ಥಿ ಬಸ್ ಪಾಸ್ ಮಾನ್ಯತಾ ಅವಧಿ ವಿಸ್ತರಣೆ - ಹುಬ್ಬಳ್ಳಿ ಸುದ್ದಿ

ವಿದ್ಯಾರ್ಥಿಗಳ ರಿಯಾಯಿತಿ ಬಸ್ ಪಾಸ್​ಗಳ ಮಾನ್ಯತೆ ಅವಧಿಯನ್ನು ಡಿ. 31ರವರೆಗೆ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರ ಹಿತದೃಷ್ಟಿಯಿಂದ ಸಾರಿಗೆ ಸಂಸ್ಥೆ ಈ ಕ್ರಮ ಕೈಗೊಂಡಿದೆ.

bus
bus
author img

By

Published : Dec 18, 2020, 8:39 PM IST

ಹುಬ್ಬಳ್ಳಿ: ಪದವಿ, ಸ್ನಾತಕೋತ್ತರ, ಡಿಪ್ಲೋಮಾ, ತಾಂತ್ರಿಕ, ವೈದ್ಯಕೀಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2019-20ನೇ ಸಾಲಿನಲ್ಲಿ ವಿತರಣೆಯಾಗಿರುವ ರಿಯಾಯಿತಿ ಬಸ್ ಪಾಸ್​ಗಳ ಅವಧಿಯನ್ನು ಡಿ. 10ರವರೆಗೆ ಮಾನ್ಯ ಮಾಡಲಾಗಿತ್ತು.

ಸದರಿ ವಿದ್ಯಾರ್ಥಿಗಳ ರಿಯಾಯಿತಿ ಬಸ್ ಪಾಸ್​ಗಳ ಮಾನ್ಯತೆ ಅವಧಿಯನ್ನು ಡಿ. 31ರವರೆಗೆ ವಿಸ್ತರಿಸಲಾಗಿದೆ ಎಂದು ವಾಕರಸಾ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್.ರಾಮನಗೌಡರ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಹಾಗೂ ಪೋಷಕರ ಹಿತದೃಷ್ಟಿಯಿಂದ ಸಾರಿಗೆ ಸಂಸ್ಥೆ ಈ ಕ್ರಮ ಕೈಗೊಂಡಿದೆ. ವಿದ್ಯಾರ್ಥಿಗಳು ಪ್ರಸಕ್ತ ವರ್ಷದಲ್ಲಿ ಕಾಲೇಜುಗಳಿಗೆ ದಾಖಲಾಗಿರುವ ಬಗ್ಗೆ ಈ ವರ್ಷದ ಶುಲ್ಕ ಪಾವತಿ ರಶೀದಿ ಹಾಗೂ 2019-20ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ತೋರಿಸಿ ತಮ್ಮ ವಾಸ ಸ್ಥಳದಿಂದ ಕಾಲೇಜಿಗೆ ಹೋಗಿ ಬರಲು ಪಾಸ್​ನಲ್ಲಿ ನಮೂದಿಸಿದ ಮಾರ್ಗದಲ್ಲಿ ಸಾಮಾನ್ಯ ಹಾಗೂ ವೇಗದೂತ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.