ETV Bharat / city

ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ವಾಟಾಳ್ ವಿಭಿನ್ನ ಪ್ರತಿಭಟನೆ - ಕನ್ನಡ ಚಳವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಪ್ರತಿಭಟನೆ

ಉತ್ತರ ಕರ್ನಾಟಕ ಭಾಗದಲ್ಲಿ ಹೆಸರಿಗೆ ಮಾತ್ರ ಸುವರ್ಣ ಸೌಧ ಕಟ್ಟಲಾಗಿದೆ.‌ ಮುಂದಿನ ದಿನಗಳಲ್ಲಿ ಅದನ್ನು ಸರ್ಕಾರ ಮಾರಾಟ ಮಾಡಲು ಹಿಂದೇಟು ಹಾಕುವುದಿಲ್ಲ ಎಂದು ವಾಟಾಳ್​ ನಾಗರಾಜ್​ ಕಿಡಿಕಾರಿದರು.

Vatal nagaraj
ವಾಟಾಳ್
author img

By

Published : Aug 24, 2020, 1:06 PM IST

ಹುಬ್ಬಳ್ಳಿ: ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಕನ್ನಡ ಚಳವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ವಿಭಿನ್ನ ಪ್ರತಿಭಟನೆ ನಡೆಸಿದರು.

ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ವಾಟಾಳ್​ ನಾಗರಾಜ್

ನಗರದ ಚೆನ್ನಮ್ಮ ವೃತ್ತದಲ್ಲಿ ಚಾಪೆಯ ಮೇಲೆ ಮಲಗುವ ಮೂಲಕ ಪ್ರತಿಭಟನೆ ನಡೆಸಿದ ಅವರು, ರಾಜ್ಯ ಹಾಗೂ ಕೇಂದ್ರ ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿ ಮರೆತಿವೆ ಎಂದು ಕಿಡಿಕಾರಿದರು.

ಕಳೆದ ವರ್ಷ ಸಂಭವಿಸಿದ ಅತಿವೃಷ್ಟಿ ಮತ್ತು ಅನಾವೃಷ್ಟಿಯ ಪರಿಹಾರ ಜನರಿಗೆ ಇನ್ನೂ ತಲುಪಿಲ್ಲ. ಉತ್ತರ ಕರ್ನಾಟಕ ಭಾಗವನ್ನು ಸರ್ಕಾರಗಳು ಕಡೆಗಣನೆ ಮಾಡುತ್ತಿವೆ‌‌. ಉತ್ತರ ಕರ್ನಾಟಕ ಭಾಗದಲ್ಲಿ ಹೆಸರಿಗೆ ಮಾತ್ರ ಸುವರ್ಣ ಸೌಧ ಕಟ್ಟಲಾಗಿದೆ.‌ ಮುಂದಿನ ದಿನಗಳಲ್ಲಿ ಅದನ್ನು ಸರ್ಕಾರ ಮಾರಾಟ ಮಾಡಲು ಹಿಂದೇಟು ಹಾಕುವುದಿಲ್ಲ. ಹೀಗಾಗಿ ಈ ಬೆಳಗಾವಿ ಸುವರ್ಣ ಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಸಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರದಿಂದ ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ 25 ಸಾವಿರ ಕೋಟಿ ಬಿಡುಗಡೆ ಮಾಡಬೇಕು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉತ್ತರ ಕರ್ನಾಟಕಕ್ಕೆ ಆಗಮಿಸಬೇಕು. ಇಲ್ಲಿನ ಜ್ವಲಂತ ಸಮಸ್ಯೆಗಳನ್ನ ಪರಿಶೀಲನೆ ಮಾಡಬೇಕು. ಸಿಎಂ ಯಡಿಯೂರಪ್ಪ ಅವರು ಕೇವಲ ವೈಮಾನಿಕ ಸಮೀಕ್ಷೆ ಮಾಡದೆ ಕೆಳಗಿಳಿದು ಸಮೀಕ್ಷೆ ಮಾಡಬೇಕು. ಶೀಘ್ರವೇ ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗಾಗಿ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.