ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನಿಗಾಗಿ ಹೈಕೋರ್ಟ್ಗೆ ಮೊರೆ ಹೋಗಿದ್ದಾರೆ.
ನಿನ್ನೆ ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯ ವಿನಯ್ ಕುಲಕರ್ಣಿ ಅವರಿಗೆ ಜಾಮೀನು ನೀಡಲು ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಪರ ವಕೀಲರು ಹೈಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ಓದಿ-ಯೋಗೇಶ್ ಗೌಡ ಹತ್ಯೆ ಪ್ರಕರಣ: ಎರಡು ದಿನಗಳ ಸಿಬಿಐ ಕಸ್ಟಡಿಗೆ ಚಂದ್ರಶೇಖರ ಇಂಡಿ
ವಿನಯ್ ಕುಲಕರ್ಣಿ ಸೋದರ ಮಾವನನ್ನು ವಶಕ್ಕೆ ಪಡೆದ ಸಿಬಿಐ
ಯೋಗೇಶಗೌಡ ಹತ್ಯೆ ಕೇಸ್ನಲ್ಲಿ ವಿಚಾರಣೆ ಎದುರಿಸುತ್ತಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಸೋದರ ಮಾವ ಚಂದ್ರಶೇಖರ ಇಂಡಿ ಅವರನ್ನು ಸಿಬಿಐ ಕಸ್ಟಡಿಗೆ ಪಡೆದುಕೊಂಡಿದ್ದು, ಧಾರವಾಡ ಕೇಂದ್ರ ಕಾರಾಗೃಹದಿಂದ ಧಾರವಾಡ ಉಪನಗರ ಠಾಣೆಗೆ ಕರೆ ತಂದಿದ್ದಾರೆ.
ಸಿಬಿಐ ವಿಶೇಷ ನ್ಯಾಯಾಲಯ ಎರಡು ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿ ಆದೇಶಿಸಿತ್ತು. ಈ ಹಿನ್ನೆಲೆ ಎರಡು ದಿನಗಳ ಕಾಲ ಚಂದ್ರಶೇಖರ ಇಂಡಿಗೆ ಸಿಬಿಐ ಡ್ರಿಲ್ ನಡೆಸಲಿದೆ.