ಧಾರವಾಡ: ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಎರಡನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಒಂದು ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.
ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡುವಂತೆ ಸಿಬಿಐ ಅಧಿಕಾರಿಗಳು ಕೇಳಿದರು. ಆದರೆ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿದೆ. ನ್ಯಾಯಾಲಯದಲ್ಲಿ ತಮಗೆ ವಿಚಾರಣೆ ವೇಳೆ ನೋಟಿಸ್ ನೀಡಿದ್ದರಾ, ಆರೋಗ್ಯ ತಪಾಸಣೆ ಮಾಡಿದ್ದರಾ ಎಂದು ನ್ಯಾಯಾಧೀಶರು ಮಾಜಿ ಸಚಿವರಿಗೆ ಪ್ರಶ್ನೆ ಕೇಳಿದರು ಎನ್ನಲಾಗಿದೆ. ನಾಳೆ ವಿಡಿಯೋ ಕಾನ್ಫರೆನ್ಸ್ ಮುಖಾಂತರ ವಿಚಾರಣೆ ನಡೆಸುವ ಸಾಧ್ಯತೆಯಿದೆ.