ETV Bharat / city

ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲು ಸಂಚು.. ಮೌಲ್ವಿ ವಾಸಿಂ ಪಠಾಣ್ ವಿಡಿಯೋ ಬಿಡುಗಡೆ - Wasim Pathan on Hubli riot

ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೌಲಾನಾ ವಾಸಿಂ ಪಠಾಣ್ ತಮ್ಮ ಹೇಳಿಕೆ ಬಿಡುಗಡೆ ಮಾಡಿದ್ದಾನೆ. ತಮ್ಮ ವಿರುದ್ಧ ಷಡ್ಯಂತ್ರ ನಡೆದಿದೆ, ನನ್ನನ್ನು ಸಿಲುಕಿಸಲು ಸಂಚು ನಡೆದಿದೆ ಎಂದು ಆರೋಪಿಸಿದ್ದಾರೆ.

Wasim Pathan statement on Hubli riot case
ವಾಸಿಂ ಪಠಾಣ್ ಹೇಳಿಕೆ
author img

By

Published : Apr 21, 2022, 2:12 PM IST

ಹುಬ್ಬಳ್ಳಿ(ಧಾರವಾಡ): ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ಆವರಣದಲ್ಲಿ ಕಳೆದ ಶನಿವಾರ ರಾತ್ರಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮಾಸ್ಟರ್ ಮೈಂಡ್ ಎನ್ನಲಾಗ್ತಿರುವ ಮೌಲ್ವಿ ಮೌಲಾನಾ ವಾಸಿಂ ಪಠಾಣ್ ಹೇಳಿಕೆ ಬಿಡುಗಡೆ ಮಾಡಿದ್ದಾನೆ. ವಿಡಿಯೋದಲ್ಲಿ ಮಾತನಾಡಿ, ಹುಬ್ಬಳ್ಳಿಯಲ್ಲಿ ದೊಡ್ಡ ಘಟನೆ ನಡೆದಿದೆ. ಈ ಕುರಿತು ಮಾತನಾಡಲು ನಿಮ್ಮ ಮುಂದೆ ಬಂದಿದ್ದೇನೆ ಎಂದು ಹೇಳಿದ್ದಾರೆ.

ವಾಸಿಂ ಪಠಾಣ್ ಹೇಳಿಕೆ

ನಮ್ಮ ಧರ್ಮಕ್ಕೆ ಅಪಮಾನ ಮಾಡಿದ ಬಗ್ಗೆ ಮುಸ್ಲಿಂ ಯುವಕರಲ್ಲಿ ಅಸಮಾಧಾನ ಇತ್ತು. ಈ ಕುರಿತು ದೂರು ನೀಡಲು ಹಲವಾರು ಯುವಕರು ಅಲ್ಲಿ ಜಮಾಯಿಸಿದ್ದರು. ಜನರ ಜೊತೆಗೆ ಮಾತನಾಡಲು ನನ್ನನ್ನು ಕರೆಸಿದ್ದರು. ಪೊಲೀಸರ ಜೊತೆಗೆ ಮಾತನಾಡಿದೆ. ಪೊಲೀಸರು ಸಹಕಾರ ಕೊಟ್ಟಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆಯೇ ಪೊಲೀಸರೇ ಜೀಪ್ ಹತ್ತಿ ಜನರಿಗೆ ತಿಳಿ ಹೇಳಲು ಹೇಳಿದರು. ನಾನು ವಾಹನದ ಮೇಲೆ ಹತ್ತಿದಾಗ ಅಲ್ಲಿ ಮೈಕ್ ಇರಲಿಲ್ಲ. ಹೀಗಾಗಿ ಕೈ ಸನ್ನೆ ಮಾಡುವ ಮೂಲಕ ಶಾಂತಿ ಕಾಪಾಡಲು ಹೇಳಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಆದರೆ ನಾನೇ ಅದರ ಪಿತೂರಿದಾರ ಎಂದು ಬಿಂಬಿಸಲಾಗುತ್ತಿದೆ. ‌ನಾನು ಘಟನೆ ಮಾಸ್ಟರ್ ಮೈಂಡ್ ಅಲ್ಲ. ನನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ. ಹುಬ್ಬಳ್ಳಿಯ ವಾತಾವರಣ ಹದಗೆಡಿಸುವ ಉದ್ದೇಶ ನನ್ನದಾಗಿರಲಿಲ್ಲ. ಸಾಮಾಜಿಕ ಜಾಲತಾಣದಲ್ಲಿ ನನ್ನ ವಿರುದ್ಧ ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾಗಿದೆ. ಪೊಲೀಸ್ ಇಲಾಖೆಯ ಬಗ್ಗೆ ನನಗೆ ಭರವಸೆ ಇದೆ. ಪೊಲೀಸರ ಮುಂದೆ ಹಾಜರಾಗಿ ನನ್ನ ಹೇಳಿಕೆ ಕೊಡುತ್ತೇನೆ. ಸತ್ಯಕ್ಕೆ ನ್ಯಾಯ ಸಿಗುತ್ತದೆ ಎಂದು ನಂಬಿದ್ದೇನೆ. ಜನರನ್ನು ನಿಯಂತ್ರಿಸುವ ಕಾರ್ಯ‌ ಮಾಡಿದೆ. ನಿಮ್ಮ ನಿಮ್ಮ ಮನೆಗೆ ವಾಪಸ್ ಹೋಗಿ ಎಂದು ಅಲ್ಲಿ ನೆರೆದಿದ್ದ ಯುವಕರಿಗೆ ಹೇಳುತ್ತಿದ್ದೆ. ನನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ ಎಂದು ವಾಸಿಂ ಪಠಾಣ್ ಆರೋಪಿಸಿದ್ದಾರೆ.

ಇದನ್ನೂ ಓದಿ: ನಾವೆಲ್ಲರೂ ಒಂದೇ ತಾಯಿಯ ಮಕ್ಕಳು.. ಶಾಂತಿ ಸೌಹಾರ್ದತೆಯಿಂದ ಬದುಕೋಣ: ಅಬ್ದುಲ್​ ಅಜೀಮ್​

ನಾನು ಪೊಲೀಸರ ಮುಂದೆ ಹಾಜರಾಗಬೇಕು ಅಂತ ಇದ್ದೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಹರದಾಡಿರುವ ಸುದ್ದಿಯಿಂದ ನಮ್ಮ ಮನೆಯವರು ಶರಣಾಗದಂತೆ ಹೇಳಿದರು. ಆದರೆ ಈಗ ನನ್ನ ಮೇಲೆ ಆರೋಪಗಳ ಸುರಿಮಳೆಯಾಗುತ್ತಿದೆ. ನಾನು ತಪ್ಪು ಮಾಡಿದರೆ ಶಿಕ್ಷೆ ಕೊಡಲಿ ಎಂದು ವಾಸಿಂ ಪಠಾಣ ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.