ಹುಬ್ಬಳ್ಳಿ: ಇಂದು ಸುರಿದ ಭಾರಿ ಮಳೆಯಿಂದಾಗಿ ನಗರದ ವಿಶ್ವೇಶ್ವರ ನಗರ ವಾರ್ಡ್ ನಂಬರ್ 28 ರಲ್ಲಿ ಬರುವ ಬಹುತೇಕ ಮನೆಗಳಲ್ಲಿ ನೀರು ನುಗ್ಗಿದೆ.
ಒಂದೆಡೆ ಕೊರೊನಾ ಮತ್ತೊಂದೆಡೆ ಮಳೆರಾಯನ ಆರ್ಭಟಕ್ಕೆ ಹುಬ್ಬಳ್ಳಿ ವಿಶ್ವೇಶ್ವರ ನಗರದ ಜನ ತತ್ತರಿಸಿದ್ದಾರೆ. ಇಲ್ಲಿನ ಹಲವಾರು ಮನೆಗಳಿಗೆ ನೀರು ನುಗ್ಗಿದ ಪರಿಣಾಮ ನೀರು ಹೋರ ಹಾಕಲು ಕುಟುಂಬಸ್ಥರು ಹರಸಾಹಸ ಪಡುತ್ತಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳಿಗೆ ಕುಟುಂಬಸ್ಥರು ಕರೆ ಮಾಡಿದರೆ, ಅವರು ಕರೆ ಸ್ವೀಕರಿಸುತ್ತಿಲ್ಲ ಮಳೆ ಬಂದರೆ ಸಾಕು ಇಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ, ಆದ್ದರಿಂದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ.