ಧಾರವಾಡ : ಕುಡಿದು ಬಂದು ಜಗಳವಾಡುತ್ತಿದ್ದ ಪತಿಯನ್ನು ಪತ್ನಿ ಮಗಳೊಂದಿಗೆ ಸೇರಿಕೊಂಡು ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಮರೇವಾಡ ಗ್ರಾಮದಲ್ಲಿ ನಡೆದಿದೆ.
ಈರಣ್ಣ ಎಂಬುವರು ಕೊಲೆಯಾದ ಪತಿ. ಶೋಭಾ ಎಂಬಾಕೆ ಹತ್ಯೆಗೈದ ಆರೋಪಿ. ಇವರು ಧಾರವಾಡ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾಗಿದ್ದಾರೆ. ಶುಕ್ರವಾರ ಕುಡಿದು ಬಂದ ಈರಣ್ಣ ಪತ್ನಿ ಮತ್ತು ಮಗಳೊಂದಿಗೆ ಜಗಳಕ್ಕೆ ಮುಂದಾಗಿದ್ದರಂತೆ.
ಈ ವೇಳೆ ಶೋಭಾ ಮಗಳೊಂದಿಗೆ ಸೇರಿಕೊಂಡು ಪತಿಯ ಮೇಲೆ ಹಲ್ಲೆ ಮಾಡಿದ್ದಾರೆ. ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ಈರಣ್ಣ ಅವರನ್ನು ಹುಬ್ಬಳ್ಳಿಯ ಕಿಮ್ಸ್ನಲ್ಲಿ ದಾಖಲಿಸಲಾಗಿತ್ತು.
ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.