ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಕಿಮ್ಸ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ರೇವಣ ಸಿದ್ದಪ್ಪ ಹಲ್ಲೆಗೊಳಗಾದ ಸಿಬ್ಬಂದಿ. ಮಹಿಳಾ ಸಂಘಟನೆ ಅಧ್ಯಕ್ಷೆ ಹಲ್ಲೆ ಮಾಡಿರುವವರು ಎಂದು ತಿಳಿದು ಬಂದಿದೆ. ಕಳೆದ ಜೂ. 17 ರಂದು ಕ್ಷುಲ್ಲಕ ಕಾರಣಕ್ಕೆ ರೇವಣ ಸಿದ್ದಪ್ಪ ಜೊತೆ ಜಗಳ ಕಾದಿದ್ದಾರೆ. ಈ ಜಗಳ ವಿಕೋಪಕ್ಕೆ ತಿರುಗಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಅಷ್ಟೇ ಅಲ್ಲದೆ, ಸಿಬ್ಬಂದಿ ಹೊರಗಡೆ ಎಳೆದುಕೊಂಡು ಬಂದು ಮೈ ಮೇಲಿನ ಬಟ್ಟೆ ಹರಿದು ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇನ್ನು ಸಿಬ್ಬಂದಿ ಏನೇ ತಪ್ಪು ಮಾಡಿದ್ರೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕಿತ್ತು. ಕೆಲಸದಲ್ಲಿ ಇರುವಾಗ ಹಲ್ಲೆ ಮಾಡಿರುವುದು ಸರಿಯಲ್ಲ ಎಂಬ ಸಾಕಷ್ಟು ಚರ್ಚೆಯೂ ನಡೆದಿದೆ. ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.