ಹುಬ್ಬಳ್ಳಿ: ಕೆರೆಯಲ್ಲಿ ಈಜಲು ತೆರಳಿದ್ದ ಬಾಲಕನೊಬ್ಬ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಕುಸಗಲ್ ಗ್ರಾಮದಲ್ಲಿ ನಡೆದಿದೆ.
ಯಲ್ಲಪ್ಪ ಗಾಣಗೇರ (12) ಸಾವನ್ನಪ್ಪಿರುವ ದುರ್ದೈವಿಯಾಗಿದ್ದು, ಕುಸುಗಲ್ ಗ್ರಾಮದ ಕೆರೆಯಲ್ಲಿ ಈಜಲು ತೆರಳಿದ್ದಾಗ ದುರ್ಘಟನೆ ನಡೆದಿದೆ. ಇನ್ನು ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.