ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ಕಡದಳ್ಳಿ ಗ್ರಾಮದ ಹೊರವಲಯದಲ್ಲಿರುವ ಬೆಣ್ಣೆಹಳ್ಳದಲ್ಲಿ ಎರಡು ದಿನಗಳಿಂದ ಸಿಲುಕಿ ಪ್ರಾಣಾಪಾಯದಲ್ಲಿದ್ದ ಆಂಧ್ರಪ್ರದೇಶದ ಯುವಕ ಮದನ ಎಂಬಾತನನ್ನು ರಕ್ಷಣೆ ಮಾಡಲಾಗಿದೆ. ನಿರಂತರವಾಗಿ ಸುರಿದ ಮಳೆಯಿಂದ ಬೆಣ್ಣೆಹಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಶನಿವಾರ ಯುವಕನನ್ನು ಗಮನಿಸಿದ ಗ್ರಾಮಸ್ಥರು ಅಗ್ನಿಶಾಮಕ ದಳ ಹಾಗೂ ಪೊಲೀಸ್ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಯುವಕನನ್ನು ರಕ್ಷಿಸಿದರು. ಸಚಿವ ಹಾಗೂ ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದರು. ಯುವಕ ಸಾಕಷ್ಟು ಬಳಲಿದ್ದರಿಂದ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ: ಕೊಪ್ಪಳ ಮಳೆ ಹಾನಿ ಪ್ರದೇಶಕ್ಕೆ ಜನಪ್ರತಿನಿಧಿಗಳ ಭೇಟಿ, ಪರಿಹಾರದ ಭರವಸೆ