ಕಲಬುರಗಿ: ಜಿಲ್ಲೆಯ ಶಹಾಬಾದ್ ಪಟ್ಟಣದಲ್ಲಿ ಕೊರೊನಾ ಉಲ್ಭಣಗೊಂಡಿದ್ದು, ಬ್ಯಾಂಕ್ ಸಿಬ್ಬಂದಿಗೆ ಸೋಂಕು ವಕ್ಕರಿಸಿದೆ. ಪರಿಣಾಮ, ಎಸ್‌ಬಿಐ ಹಾಗೂ ಕೆನರಾ ಬ್ಯಾಂಕ್ ಕಾರ್ಯ ಸ್ಥಗಿತಗೊಳಿಸಲಾಗಿದೆ.
ಶಹಾಬಾದ್ ಪಟ್ಟಣದಲ್ಲಿ ನಿನ್ನೆ ಒಂದೇ ದಿನ 15 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಲ್ಲಿ ಪಟ್ಟಣದ ಕೆನರಾ ಬ್ಯಾಂಕ್ನ 5 ಸಿಬ್ಬಂದಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಇಬ್ಬರು ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿದೆ.
ಇದನ್ನೂ ಓದಿ: ವಿಜಯಪುರ ಜಿಲ್ಲೆಯಲ್ಲಿ 32 ಮಕ್ಕಳಲ್ಲಿ ಕಾಣಿಸಿಕೊಂಡ ಕೊರೊನಾ
ಕೆನರಾ ಬ್ಯಾಂಕ್ನಲ್ಲಿ ಒಟ್ಟು 16 ಸಿಬ್ಬಂದಿಯಲ್ಲಿ ಐವರಿಗೆ ಸೋಂಕು ತಗುಲಿದ ಹಿನ್ನೆಲೆ ಉಳಿದವರ ಸ್ವಾಬ್ ಅನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ತಾತ್ಕಾಲಿಕವಾಗಿ ಎರಡು ಬ್ಯಾಂಕ್ಗಳನ್ನು ಬಂದ್ ಮಾಡಲಾಗಿದೆ. ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡು ಬ್ಯಾಂಕ್ಗಳು ತಮ್ಮ ಕಾರ್ಯ ಪುನಾರಂಭ ಮಾಡಲಿವೆ.