ETV Bharat / city

ಕಲಬುರಗಿಯಲ್ಲಿ ಕೊರೊನಾಗೆ ಮತ್ತೊಂದು ಬಲಿ: ಜಿಲ್ಲೆಯಲ್ಲಿ ಮೃತರ ಸಂಖ್ಯೆ 7ಕ್ಕೆ ಏರಿಕೆ - corona virus

ಇಂದು ಜಿಲ್ಲೆಯಲ್ಲಿ ಮತ್ತೋರ್ವ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಪೇಸೆಂಟ್ - 848 ರಿಂದ 45 ವರ್ಷದ ಪುರುಷನಿಗೆ ಸೋಂಕು ತಗುಲಿದೆ. ಸದ್ಯ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 75ಕ್ಕೆ ಏರಿದರೆ, ಮೃತರ ಸಂಖ್ಯೆ 07ಕ್ಕೇರಿದೆ.

ಕಲಬುರಗಿಲ್ಲಿ ಕೊರೊನಾ ಮಹಾಮಾರಿಗೆ ಮತ್ತೊಂದು ಬಲಿ.

author img

By

Published : May 13, 2020, 1:26 PM IST

ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿಗೆ ಮತ್ತೊಂದು ಬಲಿಯಾಗಿದೆ. ತೀವ್ರ ಉಸಿರಾಟದ ತೊಂದರೆ ಎದುರಿಸುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆತರುವುದರೊಳಗಾಗಿ ಸಾವನ್ನಪ್ಪಿದ್ದಾನೆ.

ಮೃತಪಟ್ಟ ವ್ಯಕ್ತಿ ಮೋಮಿನಪುರ ಕಂಟೇನ್​ಮೆಂಟ್​ ಝೋನ್​ಗೆ ಸೇರಿದವನಾಗಿದ್ದಾನೆ. ಈತನಿಗೆ ಯಾರಿಂದ ಸೋಂಕು ಬಂದಿದೆ ಎಂಬ ಟ್ರಾವೆಲ್ ಹಿಸ್ಟರಿ ಇನ್ನೂ ಸಿಕ್ಕಿಲ್ಲ. ಆಸ್ಪತ್ರೆಗೆ ಬರುವುರೊಳಗಾಗಿ ಮೃತಪಟ್ಟ ವ್ಯಕ್ತಿಯ ಥ್ರೋಟ್ ಸ್ಯಾಂಪಲ್ ಸಂಗ್ರಹಿಸಿ ಲ್ಯಾಬ್​ಗೆ ಕಳುಹಿಸಿಕೊಡಲಾಗಿತ್ತು. ಇದೀಗ ವೃದ್ಧನಿಗೆ ಕೊರೊನಾ ಸೋಂಕಿರೋದು ದೃಢಪಟ್ಟಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಸಮ್ಮುಖದಲ್ಲಿ ಮೃತನ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಜಿಲ್ಲೆಯಲ್ಲಿ ಮತ್ತೋರ್ವ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಪೇಸೆಂಟ್ - 848 ರಿಂದ 45 ವರ್ಷದ ಪುರುಷನಿಗೆ ಸೋಂಕು ತಗುಲಿದೆ. ಸದ್ಯ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 75ಕ್ಕೆ ಏರಿದರೆ, ಮೃತರ ಸಂಖ್ಯೆ 07ಕ್ಕೇರಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.