ಕಲಬುರ್ಗಿ : ರೈಲ್ವೆ ಹಳಿ ದಾಟುವ ಸಂದರ್ಭದಲ್ಲಿ ರೈಲು ಡಿಕ್ಕಿ ಹೊಡೆದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಇಲ್ಲಿನ ಪಿಡಿಎ ಇಂಜಿನಿಯರಿಂಗ್ ಕಾಲೇಜು ಬಳಿ ಶುಕ್ರವಾರ ನಡೆದಿದೆ.
ಕಲಬುರ್ಗಿಯ ಕೆಹೆಚ್ಬಿ ಕಾಲೋನಿ ನಿವಾಸಿ ಮಲ್ಲಿಕಾರ್ಜುನ ಮಂಟಾಳೆ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿರುವ ದುರ್ದೈವಿ. ಪಿಡಿಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಓದುತ್ತಿದ್ದ ಈ ವಿದ್ಯಾರ್ಥಿ, ಇಂದು ಹಳಿ ದಾಟುವ ಸಂದರ್ಭದಲ್ಲಿ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ವಾಡಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ವಾಡಿ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ವರ್ಗಾವಣೆಯಿಂದ ನೊಂದ ಮುಖ್ಯಶಿಕ್ಷಕ ಹೃದಯಾಘಾತದಿಂದ ಸಾವು