ETV Bharat / city

ಎಸಿಬಿ ಬಲೆಗೆ ಬಿದ್ದ ಭ್ರಷ್ಟ ದೈಹಿಕ ಶಿಕ್ಷಣಾಧಿಕಾರಿಗಳು - The corrupt physical education officers who fell into the ACB trap

ಲಂಚ ಪಡೆಯುತ್ತಿದ್ದ ಇಬ್ಬರು ಭ್ರಷ್ಟ ದೈಹಿಕ ಶಿಕ್ಷಣಾಧಿಕಾರಿಗಳನ್ನು ಎಸಿಬಿ ಪೊಲೀಸರು ಬಂಧಿಸಿದ್ದಾರೆ. ಗುತ್ತಿಗೆದಾರನಿಂದ ಖಾಸಗಿ ಹೋಟೆಲ್‌ನಲ್ಲಿ 5 ಸಾವಿರ ರೂ. ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದಾರೆ..

acb-arrested-two-corrupt-physical-education-officers
ಎಸಿಬಿ ಬಲೆಗೆ ಬಿದ್ದ ಭ್ರಷ್ಟ ದೈಹಿಕ ಶಿಕ್ಷಣಾಧಿಕಾರಿಗಳು
author img

By

Published : Apr 5, 2022, 12:25 PM IST

ಕಲಬುರಗಿ : ಗುತ್ತಿಗೆದಾರರಿಂದ ಲಂಚ ಪಡೆಯುವಾಗ ರೆಡ್‌ಹ್ಯಾಂಡ್ ಆಗಿ ಇಬ್ಬರು ಭ್ರಷ್ಟ ಶಿಕ್ಷಣಾಧಿಕಾರಿಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ. ಲಂಚ ಪಡೆಯುವಾಗ ಕಾರ್ಯಾಚರಣೆ ನಡೆಸಿದ ಎಸಿಬಿ ಅಧಿಕಾರಿಗಳು ಇಬ್ಬರು ಭ್ರಷ್ಟ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಚಿತ್ತಾಪುರ ತಾಲೂಕಿನ ದೈಹಿಕ ಶಿಕ್ಷಣ ಅಧಿಕಾರಿ ಶ್ರೀಕಾಂತ್ ಹಾಗೂ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರವೀಂದ್ರ ಎಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಅಧಿಕಾರಿಗಳಾಗಿದ್ದಾರೆ.

ಕ್ರೀಡಾ ಸಾಮಗ್ರಿಗಳ ಖರೀದಿಗೆ ಮಂಜೂರಾಗಿದ್ದ 50 ಸಾವಿರ ರೂಪಾಯಿ ಬಿಡುಗಡೆಗೆ ಗುತ್ತಿಗೆದಾರ ದೇವಯ್ಯ ಎಂಬುವರಿಗೆ 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರಂತೆ. ಮೊದಲ ಪಾವತಿಯಾಗಿ ನಗರದ ಹೋಟೆಲ್‌ವೊಂದರಲ್ಲಿ 5 ಸಾವಿರ ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ. ಎಸಿಬಿ ಡಿಎಸ್ಪಿ ಸಂತೋಷ ಬನ್ನಟ್ಟಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಓದಿ : ಮುದ್ದೇಬಿಹಾಳ : ಕಾಲುವೆಯಲ್ಲಿ ಮುಳುಗಿದ್ದ ವಿದ್ಯಾರ್ಥಿ ಶವ ಪತ್ತೆ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.