ಕಲಬುರಗಿ: ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 23 ವರ್ಷದ ಮಹಿಳೆಗೆ ಕೊರೊನಾ ಸೋಂಕು ತಗುಲಿರುವದು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. 274ನೇ ಸೋಂಕಿತನ ಜೊತೆ ಸಂಪರ್ಕ ಹೊಂದಿದ್ದರಿಂದ 23 ವರ್ಷದ ಮಹಿಳೆಗೆ ಕೊರೊನಾ ಸೋಂಕು ತಗುಲಿರುವದು ದೃಢಪಟ್ಟಿದೆ. ಕವಲಗಾ ಕೆ. ಗ್ರಾಮದ ಒಂದು ವರ್ಷದ ಮಗುವಿಗೆ ಕೊರೊನಾ ಸೋಂಕಿರುವುದು ನಿನ್ನೆ ದೃಢಪಟ್ಟಿತ್ತು. ಇಂದು ಅದೇ ಮಗುವಿನೊಂದಿಗೆ ಸಂಪರ್ಕ ಹೊಂದಿದ್ದ ಮಹಿಳೆಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.
ಸದ್ಯ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಈಗಾಗಲೇ ರೆಡ್ ಝೋನ್ ಪಟ್ಟಿಗೆ ಕಲಬುರಗಿ ಜಿಲ್ಲೆ ಸೇರಿದೆ.