ಕಲಬುರಗಿ: ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಇವತ್ತು ಮತ್ತೊಮ್ಮೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ನಿನ್ನೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ ಜಾಧವ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರ ನೇತೃತ್ವದಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಅಪಾರ ಬೆಂಬಲಿಗರೊಂದಿಗೆ ಬೃಹತ್ ಮೆರವಣಿಗೆ ನಡೆಸಿದರು.
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ್, ಬಸವರಾಜ್ ಮತ್ತಿಮೂಡ್, ಬಿಜೆಪಿ ಜಿಲ್ಲಾಧ್ಯಕ್ಷರೊಂದಿಗೆ ಆಗಮಿಸಿ ಎರಡನೇ ಬಾರಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.