ETV Bharat / city

ಕಲಬುರಗಿ-ಯಾದಗಿರಿ ಡಿಸಿಸಿ ಬ್ಯಾಂಕ್​​​ನಲ್ಲಿ ಅರಳಿದ ಕಮಲ - BJP Won in Kalburgi Yadagiri DCC Bank election

ಕಲಬುರಗಿ - ಯಾದಗಿರಿ ಡಿಸಿಸಿ ಬ್ಯಾಂಕ್ ಬಿಜೆಪಿ ತೆಕ್ಕೆಗೆ ಬಂದಿದ್ದು, ನೂತನ ಅಧ್ಯಕ್ಷರಾಗಿ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಹಾಗೂ ಉಪಾಧ್ಯಕ್ಷರಾಗಿ ಸುರೇಶ್ ಸಜ್ಜನ್ ಆಯ್ಕೆಯಾಗಿದ್ದಾರೆ.

BJP Won in Kalburgi Yadagiri DCC Bank election
ಅರಳಿದ ಕಮಲ
author img

By

Published : Jan 8, 2021, 9:44 PM IST

ಕಲಬುರಗಿ: ದಶಕಗಳ ಕಾಲ ಕಾಂಗ್ರೆಸ್ ಹಿಡಿತದಲ್ಲಿದ್ದ ಕಲಬುರಗಿ-ಯಾದಗಿರಿ ಡಿಸಿಸಿ ಬ್ಯಾಂಕ್​ನಲ್ಲಿ ಈ ಬಾರಿ ಕಮಲ ಅರಳಿದೆ. ಕಾಂಗ್ರೆಸ್​​ ಬಹುಮತ ಗಳಿಸಿದ್ದರೂ, ಕೊನೆಯ ಕ್ಷಣದಲ್ಲಿ ಅನರ್ಹತೆ ತಂತ್ರ ಹೆಣೆದ ಬಿಜೆಪಿ ಅಧಿಕಾರಿ ಗದ್ದುಗೆ ಏರುವಲ್ಲಿ ಯಶಸ್ವಿಯಾಗಿದೆ.

ನೂತನ ಅಧ್ಯಕ್ಷರಾಗಿ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಹಾಗೂ ಉಪಾಧ್ಯಕ್ಷರಾಗಿ ಸುರೇಶ್ ಸಜ್ಜನ್ ಆಯ್ಕೆಯಾಗಿದ್ದಾರೆ. ಈಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್​​ನ ಒಂಬತ್ತು ಸದಸ್ಯರು ಆಯ್ಕೆಯಾಗಿದ್ದರು. ಬಿಜೆಪಿಯ ಕೇವಲ ನಾಲ್ಕು ಸ್ಥಾನ ಪಡೆದುಕೊಂಡಿತ್ತು.

ಇದನ್ನೂ ಓದಿ: ತೊಗರಿ ರಾಶಿ ಮಾಡುವುದರಲ್ಲಿ ನಿರತರಾಗಿರುವ ಕಲಬುರಗಿ ರೈತರು

ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಸೇರಿ ಮೂವರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿತ್ತು. ನಾಮನಿರ್ದೇಶಿತ ಸದಸ್ಯರೂ ಸೇರಿ ಬಿಜೆಪಿ ಸಂಖ್ಯೆ 7ಕ್ಕೆ ಏರಿಕೆಯಾಗಿತ್ತು. ಬಹುಮತಕ್ಕೆ 9 ಸದಸ್ಯರ ಬೆಂಬಲ ಬೇಕಿದ್ದರಿಂದ ಕಾಂಗ್ರೆಸ್ ಅಧಿಕಾರ ಗದ್ದುಗೆ ಏರುತ್ತದೆ ಎಂಬುದು ಎಲ್ಲರ ನಿರೀಕ್ಷೆಯಾಗಿತ್ತು.

ಆದರೆ, ರಾತ್ರೋರಾತ್ರಿ ತಂತ್ರ ಹೆಣೆದ ಬಿಜೆಪಿ, ಮೂವರು ಚುನಾಯಿತ ಸದಸ್ಯರ ಅನರ್ಹತೆ ಅಸ್ತ್ರ ಬಳಸಿ, ಅಧಿಕಾರಕ್ಕೆ ಏರಲು ಹಾದಿ ಸುಗಮ ಮಾಡಿಕೊಂಡಿದೆ. ಕಾಂಗ್ರೆಸ್​ನಿಂದ ಬಸವರಾಜ ಅಣ್ಣಾರಾವ್ ಪಾಟೀಲ ಅಧ್ಯಕ್ಷ ಸ್ಥಾನಕ್ಕೆ, ಸಿದ್ಧರಾಮರೆಡ್ಡಿ ಪಾಟೀಲ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು.

ಕಾಂಗ್ರೆಸ್​ನ​​​ ಕ್ರಾಸ್ ವೋಟಿಂಗ್, ಅನರ್ಹತೆ ಅಸ್ತ್ರ ಬಳಿಸಿದ ಬಿಜೆಪಿ

ಈ ಬಾರಿ ತೀವ್ರ ಕುತೂಹಲ ಮೂಡಿಸಿದ ಚುನಾವಣೆಯಲ್ಲಿ ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳು ಕ್ರಾಸ್ ವೋಟಿಂಗ್ ಮಾಡಿರುವುದು ಬೆಳಕಿಗೆ ಬಂದಿದೆ. ಪರೋಕ್ಷವಾಗಿ ಕಾಂಗ್ರೆಸ್ ಅಭ್ಯರ್ಥಿಗಳು ಬಿಜೆಪಿಗೆ ಬೆಂಬಲ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ, ಬಿಜೆಪಿ ಐದು ಮತಗಳ ಅಂತರದಿಂದ ಗೆಲುವು ಸಾಧಿಸಿದೆ. ಬಿಜೆಪಿಯ ಅನರ್ಹತೆಯ ಅಸ್ತ್ರಕ್ಕೆ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲಬುರಗಿ-ಯಾದಗಿರಿ ಡಿಸಿಸಿ ಬ್ಯಾಂಕ್​​​ನಲ್ಲಿ ಅರಳಿದ ಕಮಲ

ಗೌತಮ ಪಾಟೀಲ್, ಸೋಮಶೇಖರ ಗೋನಾಯಕ್, ಬಾಪುಗೌಡ ಪಾಟೀಲ್ ಸದಸ್ಯತ್ವ ಅನರ್ಹಗೊಳಿಸಲಾಗಿದೆ ಎಂದು ಆದೇಶ ಹೊರಡಿಸಲಾಗಿದೆ. ಅನರ್ಹತೆ ಪ್ರಶ್ನಿಸಿ ನ್ಯಾಯಾಲಯದ ಮೋರೆ ಹೋಗುವುದಾಗಿ ಅನರ್ಹರು ತಿಳಿಸಿದ್ದಾರೆ. ಬಿಜೆಪಿ ಬಹುಮತ ಗಳಿಸುವಲ್ಲಿ ವಿಫಲವಾಗಿದ್ದು, ಅಧಿಕಾರದ ಆಸೆಗಾಗಿ ವಾಮ ಮಾರ್ಗ ಅನುಸರಿಸಿದೆ ಎಂದು ಅನರ್ಹ ಅಭ್ಯರ್ಥಿ ಸೋಮಶೇಖರ ಗೋನಾಯಕ್ ಆಕ್ರೋಶ ವ್ಯಕ್ತಪಡಿಸಿದರು.

ರೈತರ ಕಲ್ಯಾಣವೇ ನಮ್ಮ ಗುರಿ: ಡಿಸಿಸಿ ಬ್ಯಾಂಕ್ ಮೂಲಕ ರೈತರ ಕಲ್ಯಾಣಕ್ಕಾಗಿ ಅಧ್ಯಕ್ಷ ಸ್ಥಾನಕ್ಕೇರಿದ್ದೇನೆ. ಬ್ಯಾಂಕ್ ಸದ್ಯ ಆರ್ಥಿಕ ಸಂಕಷ್ಟದಲ್ಲಿದ್ದು, ರಾಜ್ಯ ಸರ್ಕಾರದ ನೆರವು ಪಡೆಯುತ್ತೇನೆ. ಡಿಸಿಸಿ ಬ್ಯಾಂಕ್​ಗೆ ₹500 ಕೋಟಿ ನೆರವು ನೀಡುವಂತೆ ಸಿಎಂ ಬಳಿ ನಿಯೋಗ ಕೊಂಡೊಯ್ಯುತ್ತೇನೆ ಎಂದು ನೂತನ ಅಧ್ಯಕ್ಷ ರಾಜಕುಮಾರ್ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.

ಸಿಎಂ ಬೀಗರು ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬೀಗರು ವಿಜಯೇಂದ್ರ ಅವರ ಮಾವನವರಾದ ಶಿವಾನಂದ ಮಾನಕರ್ ಅವರು ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಗೊಂಡಿದ್ದಾರೆ. ಮಾನಕರ್ ಈ ಮುಂಚೆ ಟಿಎಪಿಸಿಎಂಎಸ್ ಹಾಗೂ ಸಂಸ್ಕರಣಾ ಸಹಕಾರ ಸಂಘದ ನಿರ್ದೇಶಕರಾಗಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.