ETV Bharat / city

ಕಲಬುರಗಿ : ನೂತನ ಮಾದರಿಯ ತರಕಾರಿ ಮಾರುಕಟ್ಟೆ ಸಂಕೀರ್ಣಕ್ಕೆ ಅಡಿಗಲ್ಲು ಹಾಕಿದ ಸಿಎಂ - ನೂತನ ಮಾದರಿಯ ಕಾಯಿಪಲ್ಲೆ ಮಾರುಕಟ್ಟೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ 600 ಕೋಟಿ ರೂ.ಗಳ ವೆಚ್ಚದಲ್ಲಿ ದಿನದ 24 ಗಂಟೆಯೂ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಇದಲ್ಲದೆ ಕಲಬುರಗಿ ಮಹಾನಗರ ಪ್ರದೇಶದಲ್ಲಿ ಘನ ತ್ಯಾಜ್ಯ ವಸ್ತು ನಿರ್ವಹಣೆಗಾಗಿ ಇಂದು 41 ವಾಹನಗಳನ್ನು ಸಹ ಲೋಕಾರ್ಪಣೆ ಮಾಡಲಾಗಿದೆ..

model kayipalle market
ಬಿ.ಎಸ್.ಯಡಿಯೂರಪ್ಪ
author img

By

Published : Jul 10, 2021, 6:06 PM IST

ಕಲಬುರಗಿ : ಅನ್ನದಾತ ರೈತನ ಬದುಕು ಹಸನಗೊಳಿಸಲು ಹತ್ತಾರು ರೈತಾಪಿ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು, ರೈತರ ಆದಾಯ ದ್ವಿಗುಣಗೊಳಿಸುವುದೇ ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹೇಳಿದರು.

ಕಲಬುರಗಿ ನಗರದ ಎಂಎಸ್‌ಕೆ ಮಿಲ್ ವಾಣಿಜ್ಯ ಬಡಾವಣೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕಲಬುರಗಿ ನಾಗರಾಭಿವೃದ್ಧಿ ಪ್ರಾಧಿಕಾರ ಇವರ ಜಂಟಿ ಅನುದಾನದಡಿಯಲ್ಲಿ 2 ಎಕರೆ ಪ್ರದೇಶದಲ್ಲಿ ಸುಮಾರು 26.30 ಕೋಟಿ ರೂ.ಗಳ ವೆಚ್ಚದಲ್ಲಿ ನೂತನ ಮಾದರಿಯ ತರಕಾರಿ (ಕಾಯಿಪಲ್ಲೆ) ಮಾರುಕಟ್ಟೆ ಸಂಕೀರ್ಣಕ್ಕೆ ಶನಿವಾರ ಅಡಿಗಲ್ಲು ಹಾಕಿ ಮಾತನಾಡಿದ ಅವರು, ಅನ್ನದಾತನು ಬೆಳೆದ ಬೆಳೆಗೆ ಸೂಕ್ತ ಮಾರುಕಟ್ಟೆ ದೊರಕಬೇಕು ಎಂಬ ನಿಟ್ಟಿನಲ್ಲಿ ಕೃಷಿ ಮತ್ತು ತೋಟಗಾರಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ.

ಕೋವಿಡ್ ಸಂದರ್ಭದಲ್ಲಿ ಹೂವು ಬೆಳೆಗಾರರಿಗೆ ಹಾಗೂ ತರಕಾರಿ ಮಾರಾಟಗಾರರು ಸೂಕ್ತ ಮಾರುಕಟ್ಟೆ ಸಿಗದೆ ಕಷ್ಟ ಅನುಭವಿಸಿದ್ದರು. ಇದನ್ನರಿತ ಕೇಂದ್ರ ಸರ್ಕಾರ, ದೂರದ ಪ್ರದೇಶದಲ್ಲಿಯೂ ತರಕಾರಿ, ಹಣ್ಣುಗಳನ್ನು ಮಾರಾಟ ಮಾಡಲು ಸಾಗಾಣಿಕೆಗೆ “ಕಿಸಾನ್ ರೈಲು” ಯೋಜನೆ ಜಾರಿಗೆ ತಂದಿದ್ದು, ರೈತರಿಗೆ ತುಂಬಾ ಅನುಕೂಲವಾಗಿದೆ. ಮುಂದಿನ ದಿನಗಳಲ್ಲಿ ರೈತರ ಆದಾಯ ದ್ವಿಗುಣ ಮಾಡುವ ನಿಟ್ಟಿನಲ್ಲಿ ಮತ್ತಷ್ಟು ಹೊಸ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಕಾಯಿಪಲ್ಲೆ ಮಾರುಕಟ್ಟೆ ಸಂಕೀರ್ಣಕ್ಕೆ ಅಡಿಗಲ್ಲು ಹಾಕಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ 20 ಕೊಟಿ ರೂ. ಹಾಗೂ ಕಲಬುರಗಿ ನಾಗರಾಭಿವೃದ್ಧಿ ಪ್ರಾಧಿಕಾರದಿಂದ 6.30 ಕೋಟಿ ರೂ. ಹೀಗೆ ಒಟ್ಟು 26.30 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಯಿಪಲ್ಲೆ ಮಾರುಕಟ್ಟೆ ಸಂಕೀರ್ಣ ರಾಜ್ಯದ ಇತಿಹಾಸದಲ್ಲೇ ಮೊದಲ ಕಟ್ಟಡವಾಗಿದ್ದು, ತುಂಬಾ ಸಂತೋಷದಿಂದ ಅಡಿಗಲ್ಲು ನೆರವೇರಿಸಿದ್ದೇನೆ. ಈ ತರಹದ ಮಾದರಿ ತರಕಾರಿ ಮಾರುಕಟ್ಟೆ ನಿರ್ಮಾಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೂ ತರಲಾಗುವುದು ಎಂದರು.

ಕಲಬುರಗಿ ನಗರದ ಕಣ್ಣಿ ಮಾರುಕಟ್ಟೆಯಲ್ಲಿ ಸಿದ್ಧಗೊಳ್ಳಲಿರುವ ನೂತನ ಕಾಯಿಪಲ್ಲೆ ಮಾರುಕಟ್ಟೆಯಿಂದ ಈ ಭಾಗದ ರೈತರ ಹಾಗೂ ಜನರ ಬಹುದಿನಗಳ ಕನಸು ನನಸಾಗಲಿದ್ದು, ರಸ್ತೆ ಬದಿಯಲ್ಲಿ ತರಕಾರಿ ಮಾರಾಟ ಮಾಡಿ ನಷ್ಟ ಅನುಭವಿಸುತ್ತಿದ್ದ ಮತ್ತು ಮಳೆಗಾಲದಲ್ಲಿ ತುಂಬಾ ತೊಂದರೆ ಅನುಭವಿಸುತ್ತಿದ್ದ ರೈತಾಪಿ ವರ್ಗಕ್ಕೆ ಇದರಿಂದ ನೆಮ್ಮದಿ ಸಿಕ್ಕಿದೆ.

ರಸ್ತೆಯುದ್ದಕ್ಕೂ ಜನ ಗುಂಪಾಗಿ ಸೇರುವ ಕಾರಣ ಅಪಘಾತವಾಗುವ ಸಾಧ್ಯತೆಗಳನ್ನು ಮನಗಂಡು ನೂತನ ತರಕಾರಿ ಮಾರುಕಟ್ಟೆ ಸ್ಥಾಪಿಸಲಾಗುತ್ತಿದೆ. ಇದರಿಂದ ಪ್ರದೇಶದಲ್ಲಿನ ಮುಕ್ತ ಸಂಚಾರಕ್ಕೂ ಅನುವಾಗಲಿದೆ ಎಂದರು.

ರಾಜ್ಯದಲ್ಲಿ ರೈತ ಬೆಳೆದ ಬೆಳೆಗೆ ವೈಜ್ಞಾನಿಕವಾಗಿ ಬೆಲೆ ದೊರಕಿಸುವಲ್ಲಿ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಕೃಷಿ ನಮ್ಮ ಆದ್ಯತಾ ವಲಯವಾಗಿದ್ದು, ಕೃಷಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗಿದೆ. ಕೋವಿಡ್ ಲಾಕ್​ಡೌನ್ ಸಂದರ್ಭದಲ್ಲಿ ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್​ಗೆ​ ತಲಾ 10,000 ರೂ. ಗಳಂತೆ 20 ಸಾವಿರ ರೈತರಿಗೆ ಪರಿಹಾರ ನೀಡಲಾಗಿದೆ. ಅದೇ ರೀತಿ ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ ಗರಿಷ್ಠ 1 ಹೆಕ್ಟೇರ್​ಗೆ ತಲಾ 10,000 ರೂ. ಗಳಂತೆ 69,000 ಸಾವಿರ ರೈತರಿಗೆ ಆರ್ಥಿಕ ನೆರವು ನೀಡಲಾಗಿದೆ ಎಂದರು.

ನೂತನ ತರಕಾರಿ ಮಾರುಕಟ್ಟೆ ಕಾಂಪ್ಲೆಕ್ಸ್ ಬೇಸ್‍ಮೆಂಟ್ ಮಹಡಿ, ನೆಲ ಮಹಡಿ ಹಾಗೂ ಮೊದಲನೇ ಮಹಡಿ ಒಳಗೊಂಡಿದೆ. ಬೇಸ್‍ಮೆಂಟ್ ಮಹಡಿಯಲ್ಲಿ ವಾಹನ ನಿಲುಗಡೆ, ಲಿಫ್ಟ್, ಸಂಪ್ ಟ್ಯಾಂಕ್, ಎಲೆಕ್ಟ್ರಿಕಲ್ ಕೋಣೆ ಇರಲಿದೆ. ನೆಲ ಮಹಡಿಯಲ್ಲಿ 62 ಅಂಗಡಿಗಳು, ತರಕಾರಿ ಮಾರಾಟಕ್ಕೆ 192 ಮಳಿಗೆ, ಸಗಟು ವ್ಯಾಪಾರ ಹರಾಜು ಪ್ರಕ್ರಿಯೆಗೆ ಪ್ಲಾಟ್‍ಫಾರ್ಮ್, ಘನತ್ಯಾಜ್ಯ ಸಂಗ್ರಹಣೆಗೆ ಸ್ಥಳ, ಕೋಲ್ಡ್ ಸ್ಟೋರೇಜ್ ಕೋಣೆ ಹಾಗೂ ಶೌಚಾಲಯ ಇರಲಿವೆ. ಮೊದಲನೇ ಮಹಡಿಯಲ್ಲಿ 47 ಅಂಗಡಿಗಳು, ಇತರೆ ಕಾರ್ಯಾಲಯ, ಬ್ಯಾಂಕ್ ಇರಲಿದ್ದು ಒಟ್ಟಾರೆ ಸಂಕೀರ್ಣದಲ್ಲಿ 301 ಅಂಗಡಿಗಳಿರಲಿವೆ ಎಂದು ಸಿ.ಎಂ. ಯಡಿಯೂರಪ್ಪ ವಿವರಿಸಿದರು.

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ 600 ಕೋಟಿ ರೂ.ಗಳ ವೆಚ್ಚದಲ್ಲಿ ದಿನದ 24 ಗಂಟೆಯೂ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಇದಲ್ಲದೆ ಕಲಬುರಗಿ ಮಹಾನಗರ ಪ್ರದೇಶದಲ್ಲಿ ಘನ ತ್ಯಾಜ್ಯ ವಸ್ತು ನಿರ್ವಹಣೆಗಾಗಿ ಇಂದು 41 ವಾಹನಗಳನ್ನು ಸಹ ಲೋಕಾರ್ಪಣೆ ಮಾಡಲಾಗಿದೆ ಎಂದರು.

ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ್ ಜಾಧವ್ ಮಾತನಾಡಿ, ಸರ್ಕಾರ ನುಡಿದಂತೆ ನಡೆದಿದೆ. ಈ ನೂತನ ಮಾರುಕಟ್ಟೆಯಿಂದ ಪ್ರದೇಶದ ರೈತರು ಸುಲಲಿತವಾಗಿ ವ್ಯಾಪಾರ ಮಾಡಬಹುದು. ಮಳಿಗೆಗಳು ಅರ್ಹ ಫಲಾನುಭವಿಗಳಿಗೆ ಸಿಗುವಂತಾಗಲಿ ಎಂದು ಆಶಿಸಿದರು.

ಕೋವಿಡ್ ಹಾಗೂ ಇತರೆ ಅಭಿವೃದ್ಧಿ ಕೆಲಸಗಳ ಪ್ರಗತಿ ಪರಿಶೀಲನಾ ಸಭೆ ರದ್ದು

ಅಭಿವೃದ್ಧಿ ಕೆಲಸಗಳ ಪ್ರಗತಿ ಪರಿಶೀಲನಾ ಸಭೆ ರದ್ದು : ಸಿಎಂ ಬಿಎಸ್‌ವೈ ಜಿಲ್ಲಾಡಳಿತದೊಂದಿಗೆ ಇಂದು ನಡೆಸಬೇಕಾದ ಕೋವಿಡ್ ಹಾಗೂ ಇತರೆ ಅಭಿವೃದ್ಧಿ ಕೆಲಸಗಳ ಪ್ರಗತಿ ಪರಿಶೀಲನಾ ಸಭೆ ರದ್ದಾಗಿದೆ. ಸಮಯದ ಅಭಾವ ಹಾಗೂ ನಗರದಲ್ಲಿ ಮೋಡ ಕವಿದ ವಾತಾವರಣದ ಹಿನ್ನೆಲೆ ಸಭೆ ರದ್ದುಗೊಳಿಸಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಿಗದಿಯಾಗಿತ್ತು. ಸುಮಾರು 15 ದಿನಗಳಿಂದ ವಿವಿಧ ಇಲಾಖೆಯ ಪ್ರಮುಖ ಅಧಿಕಾರಿಗಳು ದಾಖಲಾತಿಗಳನ್ನು ಸಂಗ್ರಹಿಸಿ, ನಿಗದಿಯಂತೆ ಇಂದು ಸಭೆಗೆ ಹಾಜರಾಗಿದ್ದರು. ಸಭೆ ರದ್ದಾದ ಹಿನ್ನೆಲೆ ಅಧಿಕಾರಿಗಳು ವಾಪಸ್ ತೆರಳಿದ್ರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.