ಕಲಬುರಗಿ: ಹಿಜಾಬ್ ತಂಟೆಗೆ ಬಂದರೆ ತುಂಡು ತುಂಡು ಮಾಡ್ತೇವೇ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ಅವರನ್ನು ಹೈದರಾಬಾದ್ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಸೇಡಂ ಪಟ್ಟಣದಲ್ಲಿ ನಡೆದ ಹಿಜಾಬ್ ಪರ ಪ್ರತಿಭಟನೆಯಲ್ಲಿ ಮುಕ್ರಂ ಖಾನ್ ಅವರ ಪ್ರಚೋಧನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂದ ಕಳೆದ ಫೆ.16 ರಂದು ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದಂತೆ ಅಜ್ಞಾತ ಸ್ಥಳಕ್ಕೆ ತೆರಳಿ ಮುಕ್ರಂ ಖಾನ್ ಜಾಮೀನು ಅರ್ಜಿ ಸಲ್ಲಿಸಿದ್ದರು.
ಕಲಬುರಗಿ ಜಿಲ್ಲಾ ನ್ಯಾಯಾಲಯವು ಮುಕ್ರಂ ಖಾನ್ ಜಾಮೀನು ಅರ್ಜಿಯನ್ನ ವಜಾಗೊಳಿಸಿ ಆದೇಶಿಸಿತ್ತು. ಈ ಬೆನ್ನಲ್ಲೇ ಪೊಲೀಸರು ಹೈದರಾಬಾದ್ನಲ್ಲಿ ಮುಕ್ರಂ ಖಾನ್ನನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಅನಾರೋಗ್ಯ ಹಿನ್ನೆಲೆ ಅವರನ್ನು ಹೈದರಾಬಾದ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
(ಇದನ್ನೂ ಓದಿ: ಕಾಂಗ್ರೆಸ್ ಮುಖಂಡನ ಪ್ರಚೋದನಕಾರಿ ಹೇಳಿಕೆಗೆ ಸಿದ್ಧಲಿಂಗ ಶಿವಾಚಾರ್ಯರರು ಕಿಡಿ)