ಕಲಬುರಗಿ: ರಮೇಶ್ ಜಾರಕಿಹೊಳಿ ಸೇರಿದಂತೆ ಯಾರೂ ಪಕ್ಷ ಬಿಡುವುದಿಲ್ಲ. ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ ಎಂದು ಸಚಿವ ಬಂಡೆಪ್ಪ ಕಾಶೆಂಪೂರ್ ಹೇಳಿದರು.
ಸುದ್ದಿಗಾರರೊಂದಿಗೆ ಶನಿವಾರ ಅವರು ಮಾತನಾಡಿದರು. ಬಿಜೆಪಿ ಮುಖಂಡರು ಹತಾಶೆಯ ಹೇಳಿಕೆ ನೀಡುತ್ತಿದ್ದಾರೆ. ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಹೊಸ ಅಧ್ಯಾಯ ಆರಂಭಿಸಿದ್ದಾರೆ. ನಮ್ಮದು ಉದ್ರಿ ಸರ್ಕಾರ ಅಲ್ಲ. ನಗದು ಸರ್ಕಾರ. ಕಾಂಗ್ರೆಸ್ ಮತ್ತು ಜೆಡಿಎಸ್ನಲ್ಲಿ ಯಾವುದೇ ಅಸಮಾಧಾನಗಳಿಲ್ಲ. ಕುಂದಗೋಳ ಮತ್ತು ಚಿಂಚೋಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಖಚಿತ ಎಂದು ಆತ್ಮವಿಶ್ವಾಸದಿಂದ ಹೇಳಿದರು.
ಸಿದ್ದರಾಮಯ್ಯ ಸಿಎಂ ಆಗೋ ವಿಚಾರ ನಿಮ್ಮ ಮನೆಗಳಲ್ಲಿ ಮಾತನಾಡಿಕೊಳ್ಳಿ. ಹೈಕಮಾಂಡ್ ಸೂಚನೆಯಂತೆ ನಾವೆಲ್ಲ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. ಬಾಯಿಗೆ ಬಂದಂತೆ ಹೇಳಿಕೆ ನೀಡುವುದು ಸರಿಯಲ್ಲ. ರಾಹುಲ್ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ಕುಮಾರಸ್ವಾಮಿಯನ್ನು ಸಿಎಂ ಮಾಡಿದೆ. ಆದರೆ, ಸಿದ್ದರಾಮಯ್ಯ ಅವರನ್ನು ಖುಷಿಪಡಿಸಲು ಕೆಲವರು ಇಂತಹ ಮಾತುಗಳನ್ನು ಹೇಳುತ್ತಿದ್ದಾರೆ ಎಂದರು.